ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಎಸ್. ಗವಿಮಠ ನೇಮಕ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಸನ್ನಿ ಎಸ್. ಗವಿಮಠ(ತ್ರಿಲೋಚನ) ಅವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರು ಸನ್ನಿ ಎಸ್. ಗವಿಮಠ ಅವರಿಗೆ ನೀಡಿರುವ ನೇಮಕಾತಿ ಆದೇಶ ಪತ್ರ

ಸನ್ನಿ ಎಸ್. ಗವಿಮಠ ಮೂಲತಃ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗನಾಗಿದ್ದಾನೆ.  ಆದರೆ, ಕಳೆದ ವರ್ಷ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾಗಿ ಒಂದು ವರ್ಷದೊಳಗೆ ಅವರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದು ಗಮನಾರ್ಹವಾಗಿದೆ.

Leave a Reply

ಹೊಸ ಪೋಸ್ಟ್‌