ರೂ. 2.53 ಕೋ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣ ಜಪ್ತಿ ಮಾಡಿದ ವಿಜಯಪುರ ಸಿಇಎನ್ ಪೊಲೀಸರು

ವಿಜಯಪುರ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ. 2,93,50000 ಕೋ. ನಗದನ್ನು ವಿಜಯಪುರ ಸಿಇಎನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ, ತೆಲಂಗಾಣದ ಹೈದರಾಬಾದಿನಿಂದ ರಾಜ್ಯದ ಹುಬ್ಬಳ್ಳಿಗೆ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸೋಮವಾರ ರಾತ್ರಿ ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಸುನೀಲಕುಮಾರ ನಂದೇಶ್ವರ, ಸಿಬ್ಬಂದಿಯಾದ ಎಂ. ಕೆ. ಹಾವಡಿ, ಡಿ. ಆರ್. ಪಾಟೀಲ, ಎಂ. ಬಿ. ಪಾಟೀಲ, ಮಲ್ಲು ಹೂಗಾರ ಅವರು ವಿಜಯಪುರ ನಗರದ ಸಿಂದಗಿ ಬೈಪಾಸ್ ನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸರಿಗೆ ಬಹುಮಾನ‌ ನೀಡಿದ ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ

 

ಈ ಸಂಬಂಧ ಇಬ್ಬರು ಆರೋಪಿಗಳಾದ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಬಾಲಾಜಿ ನಿಕ್ಕಂ ಮತ್ತು ಸಚೀನ ಮೋಹಿತೆ ಎಂಬುವರನ್ನು ಬಂಧಿಸಲಾಗಿದೆ. ಅಲ್ಲದೇ, ಅವರು ಹಣ ಸಾಗಿಸಲು ಬಳಸಿದ ಎಂಎಚ್-01/ ಸಿಡಿ-7537 ಕಾರು ಹಾಗೂ ಎರಡು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಅಲ್ಲದೇ, ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಹುಮಾನ ಘೋಷಿಸಿದ್ದಾರೆ.

Leave a Reply

ಹೊಸ ಪೋಸ್ಟ್‌