ವಿಜಯಪುರ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಎದುರಾಗದಂತೆ, ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.
ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಜಿಲ್ಲಾ ಪಂಚಾಯಿತಿ ವಿಜಯಪುರ(08352-277293), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ(08352-277941) ಇವರನ್ನು ಸಂಪರ್ಕಿಸಬಹುದಾಗಿದೆ.
ಅಲ್ಲದೇ ತಾಲೂಕು ಮಟ್ಟದಲ್ಲಿ ಮುದ್ದೇಬಿಹಾಳ(08356-200606), ತಾಳಿಕೋಟೆ(08356-200103), ಸಿಂದಗಿ(08488-221772), ದೇವರಹಿಪ್ಪರಗಿ (08424-200114), ಆಲಮೇಲ(08488-298900), ವಿಜಯಪುರ(08352-254044), ಬಬಲೇಶ್ವರ(08355-200005), ತಿಕೋಟಾ(08352-200129), ಇಂಡಿ (08359-200026), ಚಡಚಣ (9480831732), ಬಸವನ ಬಾಗೇವಾಡಿ(08358-245236), ನಿಡಗುಂದಿ (08426-200165), ಕೋಲಾರ(08426-200103) ಈ ಸಹಾಯವಾಣಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಶಿ ಆನಂದ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.