ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರನ್ನಾಗಿ 2012ರ ಐಎಎಸ್ ಬ್ಯಾಚ್ ನ ಅಧಿಕಾರಿ ಸುರಳ್ಕರ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ ವಿಕಾಸ ಕಿಶೋರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರಳ್ಕರ ವಿಕಾಸ ಕಿಶೋರ ಅವರನ್ನು ಸರಕಾರ ಶನಿವಾರ ಸಂಜೆ ವರ್ಗಾವಣೆ ವರ್ಗಾವಣೆ ಮಾಡಿದೆ.
ವಿಜಯಪುರ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಸುರಳ್ಕರ ವಿಕಾಸ ಕಿಶೋರ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದಾರೆ. ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ, ಯಾದಗಿರಿ ಮತ್ತು ಬೆಳಗಾವಿ ಜಿ. ಪಂ. ಸಿಇಒ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.