ದ್ವಿತೀಯ ಪಿಯು ಪರೀಕ್ಷೆ: ಎಸ್. ಎಸ್. ಪಿಯು ಕಾಲೇಜಿನ ವೇದಾಂತ ನಾವಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ- ಐಎಎಸ್ ಮಾಡುವ ಇಚ್ಛೆ ವ್ಯಕ್ತಪಡಿಸಿದ ವಿದ್ಯಾರ್ಥಿ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪಿ. ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ನಾವಿ ಇತ್ತೀಚೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಜಿಲ್ಲಾದ್ಯಂತ ಸಂತಸ ವ್ಯಕ್ತವಾಗಿದ್ದು, ವಿದ್ಯಾರ್ಥಿಯ ಪೋಷಕರು, ಕಾಲೇಜಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೃದಯಸ್ಪರ್ಷಿ ಸನ್ಮಾನ ಮಾಡಿ ಗೌರವಿಸಲಾಯಿತು. ಜಿಲ್ಲೆಗೆ ಕೀರ್ತಿ ತಂದಿದ್ದಕ್ಕೆ ಅಭಿನಂದಿಸಿದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಉಡುಗೊರೆ ನೀಡಿ ಶುಭಾಷಯ ಕೋರಿದರು.

ದ್ವಿತೀಯ ಪಿಯು ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಖಿ ವೇದಾಂತ ನಾವಿ ಅವರನ್ನು ವಿಜಯಪುರ ಡಿಸಿ ಟಿ. ಭೂಬಾಲನ ಸನ್ಮಾನಿಸಿ ಗೌರವಿಸಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲಾಕೂಿನ ಕಾಜಿಬೀಳಗಿ ಗ್ರಾಮದ ವೇದಾಂತ ನಾವಿ ವಿಜಯಪುರ ನಗರದ ಎಸ್ ಎಸ್ ಪಿಯು ಜೂನಿಯರ್ ಕಾಲೇಜ್ ನಲ್ಲಿ ಪಿಯುಸಿ ಓದುತ್ತಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್.ಎಸ್. ಕ್ಯಾಂಪಸ್ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯ ಗಿರೀಶ ಅಕಮಂಚಿ, ಪಿಯು ಇಲಾಖೆಯ ಉಪನಿರ್ದೇಶಕ ಸಿ. ಕೆ. ಹೊಸಮನಿ ಮುಂತಾದವರು ಉಪಸ್ಥಿತರಿದ್ದರು.

ಐಎಎಸ್ ಅಧಿಕಾರಿಯಾಗುವ ಕನಸು ಬಿಚ್ಚಿಟ್ಟ ವಿದ್ಯಾರ್ಥಿ

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಮುಂದೆ ತಾನು ಯುಪಿಎಸ್‌ಸಿ ಪಾಸಾಗಿ ಐಎಎಸ್ ಅಧಿಕಾರಿಯಾಗುವ ಗುರಿ ಹೊಂದಿದ್ದೇನೆ.  ನನ್ನ ಈ ಸಾಧನೆಗೆ ಪೋಷಕರು, ಗ್ರಾಮಸ್ಥರು, ಕಾಲೇಜಿನ ಎಲ್ಲ ಶಿಕ್ಷಕರು ಮತ್ತು ಸಿಬ್ಬಂದಿಯ ಪ್ರೋತ್ಸಾಹ ಕಾರಣ ಎಂದು ಹೇಳಿದರು.

Leave a Reply

ಹೊಸ ಪೋಸ್ಟ್‌