ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ಸಧೃಡ ಭಾರತ ನಿರ್ಮಾಣಕ್ಕಾಗಿ, ಸಶಕ್ತ ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ .ಭೂಬಾಲನ್ ಹೇಳಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಮಾತನಾಡಿದರು.

ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತದಾನವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿಂರುವ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಸ್ವೀಪ್ ವತಿಯಿಂದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೆ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಅವರು ಹೇಳಿದರು.

ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಅರ್ಷದ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ,   ಸೇರಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌