ಅಂಬೇಡ್ಕರ ಜಯಂತಿ: ಸಚಿವ ಎಂ. ಬಿ. ಪಾಟೀಲ ಅವರಿಂದ ಸಂವಿಧಾನ ಶಿಲ್ಪಿಯ ಪುತ್ಥಳಿಗೆ ಗೌರವ ನಮನ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ. ಇಂದು ರವಿವಾರ ನಗರದ ಅಂಬೇಡ್ಕರ್ ಚೌಕಿಗೆ ತೆರಳಿದ ಸಚಿವರು, ಜಯಂತಿ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪ್ರೊ. ರಾಜು ಆಲಗೂರ, ಷಹಜಹಾನ್ ಮುಲ್ಲಾ, […]

ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ […]

ಅಂಬೇಡ್ಕರ್ ಅವರನ್ನು ಪ್ರತಿನಿತ್ಯ ಸ್ಮರಿಸುವ ಕಾರ್ಯವಾಗಬೇಕು- ಡಿಸಿ ಟಿ. ಭೂಬಾಲನ್

ವಿಜಯಪುರ: ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಪ್ರತಿನಿತ್ಯ ಸ್ಮರಿಸಿ ಅವರ ಸಂದೇಶಗಳನ್ನು ಪಾಲಿಸುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರವರು ಬಡವರು, ಪರಿಶಿಷ್ಟ ಜಾತಿ, […]