ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಪ್ರಾಮಾಣಿಕವಾಗಿ ಮಾಡಿದೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟೆ, ಜವಾಹರ ಗೋಸಾವಿ, ಕಿರಣ ಪಾಟೀಲ, ವಿಜಯಪುರ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ, ಮಹೇಶ ಒಡೆಯರ, ವಿಕ್ರಮ ಗಾಯಕವಾಡ, ಲಕ್ಷ್ಮಣ ಜಾಧವ, ಮಡಿವಾಳ ಯಾಳವಾರ, ಚಂದ್ರು ಚೌದರಿ, ಉಮೇಶ ವೀರಕರ, ವಿಠ್ಠಲ ನಡುವಿನಕೇರಿ, ಸತೋಷ ತಳಕೇರಿ, ಮನೋಹರ ಕಾಂಬ್ಳೆ, ವಿರೇಶ ವಾಲಿಕಾರ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.