ವಿಜಯಪುರ ಡಿಡಿಪಿಐ ಎನ್. ಎಚ್. ನಾಗೂರು ಅಮಾನತು-

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ(ಡಿಡಿಪಿಐ) ಉಪನಿರ್ದೇಶಕ ಎನ್. ಎಚ್. ನಾಗೂರ ಅವರನ್ನು ಸೇವೆಯಿಂದ ಅಮಾನತು ಮಾಡಾಲಾಗಿದೆ.   ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.  ಧಾರವಾಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಶಿಫಾರಸ್ಸಿನ ಮೇಲೆ ಅಮಾನತು ಮಾಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಮಲ್ಲಕಾರ್ಜುನ ರಾಮಚಂದ್ರಪ್ಪ ಆದೇಶದಲ್ಲಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಸಂದರ್ಭದಲ್ಲಿ ಸಿಸಿ ಕೆಮೆರಾ ದೃಷ್ಯಾವಳಿ ಪರಿಶೀಲನೆ […]

ಸಂಸತ್ತಿನಲ್ಲಿ ಜಿಲ್ಲೆಯ ಪರ ಧ್ವನಿ ಎತ್ತಲು ಪ್ರೊ. ರಾಜು ಆಲಗೂರ ಗೆಲುವು ಅಗತ್ಯ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ರವಿವಾರ ನಗರದ ಐಶ್ವರ್ಯ ನಗರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು. […]

ಇಂಚಗೇರಿ ಮಠಕ್ಕೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ- ವಿರೋಧಿಗಳಿಗಿಂತ ಹೆಚ್ಚಿನ ರಣತಂತ್ರ ಹೆಣೆದಿದ್ದೇವೆ ಎಂದ ಬಿಜೆಪಿ ಅಭ್ಯರ್ಥಿ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ದಿಢೀರ್ ಭೇಟಿ ನೀಡಿ, ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.  ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಭೀಮಾ ಹೋರಾಟಗಾರ ಪಂಚಪ್ಪ ಕಲಬುರ್ಗಿ ಅವರು ಚಿಕ್ಕೋಡಿ ಸಂಸದರ ಜೊತೆಯಲ್ಲಿದ್ದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಇಂಚಗೇರಿ ಮಠದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಸೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಮಾತನಾಡಿ ಆಶೀರ್ವಾದ […]