UPSC Rank: ವಿಜಯಪುರ ಯುವಕ ಸಂತೋಷ ಶ್ರೀಕಾಂತ ಶಿರಾಡೋಣ ಗೆ 641ನೇ ರ್ಯಾಂಕ್
ವಿಜಯಪುರ: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಮತ್ತೋರ್ವ ಯುವಕ ಪಾಸ್ ಆಗುವ ಮೂಲಕ ಗಮನ ಸೆಳೆದಿದ್ದಾನೆ. ಸಂತೋಷ ಶ್ರೀಕಾಂತ ಶಿರಾಡೋಣ ದೇಶಕ್ಕೆ 641ನೇ ರ್ಯಾಂಕ್ ಪಡೆದಿದ್ದು, ಶಿರಾಡೋಣ ಕುಟುಂಬದಲ್ಲಿ ಸಂತಸ ಮೂಡಿಸಿದೆ. ವಿಜಯಪುರ ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ 5ನೇ ತರಗತಿ ವಿದ್ಯಾಭ್ಯಾಸ ಮಾಡಿರುವ ಯುವಕ, 6 ರಿಂದ 7ನೇ ತರಗತಿವರೆಗೆ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆಯಲ್ಲಿ ಮತ್ತು 8 ರಿಂದ 10ನೇ ತರಗತಿಯನ್ನು ವಿಜಯಪುರ ತಾಲೂಕಿನ ಕಗ್ಗೋಡದ ಸಂಗನಬಸವ ಇಂಟರ್ […]
UPSC Exam: ವಿಜಯಪುರ ಮೂಲದ ಯುವತಿ ವಿಜೇತಾ ಭೀಮಸೇನ ಹೊಸಮನಿಗೆ 100ನೇ ರ್ಯಾಂಕ್
ವಿಜಯಪುರ: ಯು.ಪಿ.ಎಸ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿಜಯಯಪುರ ಮೂಲದ ಯುವತಿ ವಿಜೇತಾ ಭೀಮಸೇನ ಹೊಸಮನಿಗೆ 100 ನೇ ರ‌್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಯುವತಿಯ ಪೋಷಕರು ಈಗ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಮಗಳ ಸಾಧನೆಗೆ ಪೋಷಕರ ಸಂತಸ ವ್ಯಕ್ತಪಡಿಸಿದ್ದಾರೆ. ಎಲ್. ಕೆ. ಜಿ ಯಿಂದ 5ನೇ ತರಗತಿವರೆ ವಿಜೇಜಾ ಭೀಮಸೇನ ಹೊಸಮನಿ ವಿಜಯಪುರ ನಗರದ ಸೈನಿಕ ಶಾಲೆಯ ಶಿಶುನಿಕೇತನ ಸ್ಕೂಲ್ ನಲ್ಲಿ ಓದಿದ್ದಾರೆ. 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್ ನ್ಯಾಷನಲ್ ಪಬ್ಲಿಕ್ […]
ಸ್ವೀಪ್ ಸಮಿತಿ ವತಿಯಿಂದ ವಿಜಯಪುರದಲ್ಲಿ ಮೇಣದ ಬತ್ತಿ ಬೆಳಗಿಸಿಕೊಂಡು ಜಾಗೃತಿ ಜಾಥಾ
ವಿಜಯಪುರ: ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಮಹಾನಗರ ಪಾಲಿಕೆ ಸಹಯೋಗದಲ್ಲಿ ಲೋಕಸಭೆ ಚುನಾವಣೆ 2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಮೇಣದ ಬತ್ತಿ ಬೆಳಗಿಸಿಕೊಂಡು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ತಪ್ಪದೇ ಮತದಾನ ಮಾಡುವ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪ್ರಜ್ಞಾವಂತ ನಾಗರೀಕರಾಗಿ ದೇಶದ ಏಳಿಗೆಗ ಮತದಾನ ಮಾಡುವುದನ್ನು ಮರೆಯಬಾರದು […]
Video News: ವಿಜಯಪುರ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ
ವಿಜಯಪುರ: ಬಿಜಾಪುರ(ಪ.ಜಾ) ಲೋಕಸಭೆ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಮೂರನೇ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವರ ಹಿಪ್ಪರಗಿ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಸಿ. ಟಿ. ರವಿ, ಜೆಡಿಎಸ್ ಮುಖಂಡ ಬಿ. ಡಿ. ಪಾಟೀಲ ಉಪಸ್ಥಿತರಿದ್ದರು. ಸಂಸದ […]