UPSC Exam: ವಿಜಯಪುರ ಮೂಲದ ಯುವತಿ ವಿಜೇತಾ ಭೀಮಸೇನ ಹೊಸಮನಿ‌ಗೆ 100ನೇ ರ್ಯಾಂಕ್

ವಿಜಯಪುರ: ಯು.ಪಿ.ಎಸ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿಜಯಯಪುರ ಮೂಲದ ಯುವತಿ‌ ವಿಜೇತಾ ಭೀಮಸೇನ ಹೊಸಮನಿಗೆ 100 ನೇ ರ‌್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಯುವತಿಯ ಪೋಷಕರು‌ ಈಗ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಮಗಳ ಸಾಧನೆಗೆ ಪೋಷಕರ ಸಂತಸ ವ್ಯಕ್ತಪಡಿಸಿದ್ದಾರೆ.

ಎಲ್. ಕೆ. ಜಿ ಯಿಂದ 5ನೇ ತರಗತಿವರೆ ವಿಜೇಜಾ ಭೀಮಸೇನ ಹೊಸಮನಿ ವಿಜಯಪುರ ನಗರದ ಸೈನಿಕ ಶಾಲೆಯ ಶಿಶುನಿಕೇತನ ಸ್ಕೂಲ್ ನಲ್ಲಿ ಓದಿದ್ದಾರೆ. 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಪಿಯುಸಿ ಪ್ರಥಮ ವರ್ಷ ವಿಜಯಪುರ ನಗರದ ತುಂಗಳ ಕಾಲೇಜಿನಲ್ಲಿ ಹಾಗೂ ಪಿಯುಸಿ ದ್ವಿತೀಯ ದರಬಾರ ಪಿಯು ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.

ವಿಜೇತಾ ಭೀಮಸೇನ ಹೊಸಮನಿ

ನಂತರ ಕ್ಲ್ಯಾಟ್ ಎಕ್ಸಾಂ ಉತ್ತೀರ್ಣವಾಗಿ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ
ಬಿ.ಎ ಎಲ್.ಎಲ್.ಬಿ ಕ್ರಿಮಿನಲ್ ಲಾ ಪದವಿಯನ್ನು ಗೋಲ್ಡ್ ಮೆಡಲ್ ನೊಂದಿಗೆ ಪೂರ್ಣಗೊಳಿಸಿದ್ದಾರೆ.

2020 ರಿಂದ ಮೂರು ಬಾರಿ ಯು.ಪಿ.ಎಸ್.ಸಿ ಪರೀಕ್ಷೆ ಬರೆದಿದ್ದಾರೆ. 2023ರ ಪ್ರಿಲನ್ಮರಿ ಎಕ್ಸಾಂ, ಮೇನ್ ಎಕ್ಸಾಂ ಪಾಸ್ ಆಗಿ ಸಂದರ್ಶನ ಪಾಸ್ ಮಾಡಿ ಈಗ ಉತ್ತೀರ್ಣರಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ 100ನೇ ಸ್ಥಾನ ಪಡೆದಿದ್ದಾರೆ.

ಆನ್ ಲೈನ್ ತರಬೇತಿ ಮತ್ತು ಮನೆಯಲ್ಲಿಯೇ ಹೆಚ್ಚಿನ ಅಭ್ಯಾಸ ಮಾಡಿರುವ ವಿಜೇತಾ ಭೀಮಸೇನ ಹೊಸಮನಿ ಅವರಿಗೆ ಐ.ಆರ್.ಎಸ್ ಅಂದರೆ ಇಂಡಿಯನ್ ರೆವೆನ್ಯೂ ಸರ್ವೀಸ್ ನಲ್ಲಿ ಹುದ್ದೆ ಸಿಗುವ ಸಾಧ್ಯತೆಯಿದೆ.

ಇವರ ತಂದೆ ಭೀಮಸೇನ ಹೊಸಮನಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದಾರೆ.

Leave a Reply

ಹೊಸ ಪೋಸ್ಟ್‌