Video News: ವಿಜಯಪುರ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ಬಿಜಾಪುರ(ಪ.ಜಾ) ಲೋಕಸಭೆ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಮೂರನೇ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವರ ಹಿಪ್ಪರಗಿ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಸಿ. ಟಿ. ರವಿ, ಜೆಡಿಎಸ್ ಮುಖಂಡ ಬಿ. ಡಿ. ಪಾಟೀಲ ಉಪಸ್ಥಿತರಿದ್ದರು.

ವಿಜಯಪುರ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಿಗಜಿಣಗಿ ಎರಡನೇ ಸೆಟ್ ನಾಮಪತ್ರ ಸಲ್ಲಿಸಿದರು.

ಸಂಸದ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ ವಿಡಿಯೋ ನ್ಯೂಸ್:

ಎರಡನೇ ಬಾರಿ ನಾಮಪತ್ರ ಸಲ್ಲಿಸುವ ವೇಳೆ ಕಲಬುರಗಿ ಬಿಜೆಪಿ ಸಂಸದ ಮತ್ತು ಅಭ್ಯರ್ಥಿ ಉಮೇಶ ಜಾಧವ, ಮಾಜಿ ಸಚಿವ ಹಾಲಪ್ಪ ಆಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ನ್ಯಾಯವಾದಿ ಜಿ. ಎಸ್. ಕುಲಕರ್ಣಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌