Election: ಜಿಗಜಿಣಗಿ, ಆಲಗೂರ ಸೇರಿ 12 ಅಭ್ಯರ್ಥಿಗಳ ನಾಮಪತ್ರ ಸ್ವೀಕಾರ- 9 ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ
ವಿಜಯಪುರ: ಲೋಕಸಭೆ ನಾಮಪತ್ರ ಪರಿಶೀಲನೆ ಪೂರ್ಣಗೊಂಡಿದ್ದು, ಬಿಜೆಪಿ, ಕಾಂಗ್ರೆಸ್, ಬಿಎಸ್ಪಿ ಸೇರಿ 12 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿದ್ದು, ಒಂಬತ್ತು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ. ಏ. 19 ರಂದು ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಒಟ್ಟು 21 ಅಭ್ಯರ್ಥಿಗಳು 35 ನಾಮಪತ್ರ ಸಲ್ಲಿಸಿದ್ದರು. ಈ ನಾಮಪತ್ರಗಳ ಪರಿಶೀಲನೆ ನಡೆಯಿತು. ಈ ಸಂದರ್ಭದಲ್ಲಿ 12 ಅಭ್ಯರ್ಥಿಗಳ ಅಭ್ಯರ್ಥಿಗಳ ನಾಮಪತ್ರ ಸ್ವೀಕಾರವಾಗಿದ್ದು, ಒಂಬತ್ತು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ. ನಾಮಪತ್ರ ಸ್ವೀಕತವಾದ ಅಭ್ಯರ್ಥಿಗಳು, ಪಕ್ಷದ ಮಾಹಿತಿ. ಮಲ್ಲು ಹಾದಿಮನಿ- ಬಿಎಸ್ಪಿ ರಮೇಶ ಜಿಗಜಿಣಗಿ-ಬಿಜೆಪಿ ಹಣಮಂತರಾವ […]
ಬಿ.ಎಲ್.ಡಿ.ಇ ತಾಂತ್ರಿಕ ಮಹಾವಿದ್ಯಾಲಯದ 51 ವಿದ್ಯಾರ್ಥಿಗಳಿಗೆ ಕೆ.ಎಸ್.ಸಿ.ಎಸ್.ಟಿ ವತಿಯಿಂದ ಪ್ರಾತ್ಯಕ್ಷಿಕೆಗೆ ಅನುದಾನ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ 51 ವಿದ್ಯಾರ್ಥಿಗಳು ಕರ್ನಾಟಕ ಸ್ಟೆಟ್ ಕೌನ್ಸಿಲ್ ಫಾರ್ ಸೈನ್ಸ್ ಆಂಡ್‌ಟೆಕ್ನಾಲಜಿ(ಕೆ.ಎಸ್.ಸಿ.ಎಸ್.ಟಿ)ಯ 2023-24ನೇ ಆರ್ಥಿಕ ವರ್ಷದ ಸೃಜನಶೀಲ, ನವೀನ ಯೋಜನೆಗಳ 14 ಅತ್ತುತಮ ಪ್ರಾತ್ಯಕ್ಷಿಕೆಗಳು ಆಯ್ಕೆಯಾಗಿವೆ. 51 ವಿದ್ಯಾರ್ಥಿಗಳಿಗೆ ರೂ.69000 ಧನ ಸಹಾಯ ಸಿಗಲಿದೆ. ಅಲ್ಲದೇ ವಿದ್ಯಾರ್ಥಿಗಳಲ್ಲಿರುವ ಸೂಪ್ತ ಪ್ರತಿಭೆಯನ್ನು ಮತ್ತು ಸಂಶೋಧನೆ ಯೋಜನೆಗಳನ್ನು ರೂಪಿಸಲು ಪ್ರೋತ್ಸಾಹ ಸಿಗಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಪದಾಧಿಕಾರಿಗಳು ಅಭಿನಂದನೆ […]
ನೇಹಾ ಹಿರೇಮಠ ಕೊಲೆ ಖಂಡಿಸಿ ವಿಜಯಪುರದಲ್ಲಿ ಜಂಗಮ ಸಮಾಜದ ವತಿಯಿಂದ ಪ್ರತಿಭಟನೆ
ವಿಜಯಪುರ: ಹುಬ್ಬಳ್ಳಿಯಲ್ಲಿ ಯುವತಿ ನೇಹಾ ನಿರಂಜನ ಹಿರೇಮಠ ಕೊಲೆ ಖಂಡಿಸಿ ಮತ್ತು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಗರದಲ್ಲಿ ಜಂಗಮ ಸಮಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಂಗಮ ಸಮಾಜ ಮುಖಂಡ ಸಂಜೀವ ಹಿರೇಮಠ ಮತ್ತು ಪ್ರಧಾನ ಕಾರ್ಯದರ್ಶಿ ಎಸ್. ಕೆ. ಸಾವಳಗಿಮಠ, ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ನಿರಂಜನ ಹಿರೇಮಠ ಅವರನ್ನು ಹಾಡು ಹಗಲೇ ಕಾಲೇಜಿನ ಆವರಣದಲ್ಲಿ ಚಾಕುವಿನಿಂದ ಹಿರಿದು ಕ್ರೂರವಾಗಿ […]