ನೇಹಾ‌ ಹಿರೇಮಠ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು‌ ಆಗ್ರಹಿಸಿ ಬಿಜೆಪಿ‌ ಬೃಹತ್ ಪ್ರತಿಭಟನೆ

ವಿಜಯಪುರ: ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಕೊಲೆ ಖಂಡಿಸಿ ಮತ್ತು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ಚೌಕ್ ಮಾರ್ಗವಾಗಿ ಡಾ. ಬಿ. ಆರ್.‌ಅಂಬೇಡ್ಕರ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಯಿತು.

ಮೆರವಣಿಯಲ್ಲಿ ಬೋಲೋ ಭಾರತ್ ಮಾತಾ ಕೀ ಜೈ, ಮತಾಂದ್ ಶಕ್ತಿಗಳಿಗೆ ಧಿಕ್ಕಾರ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಬೇಜವಾಬ್ದಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹಾಗೂ ಸಚಿವರಿಗೆ ಧಿಕ್ಕಾರ ಎಂದು ಘೋಷಣೆ ಹಾಕಿದರು.

ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಅಮಾಯಕ ಹಿಂದೂ ಯುವತಿಯನ್ನು ಕೊಂದಿರುವ ಹೀನ ಕೃತ್ಯಕ್ಕೆ ಕಾರಣನಾದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು. ಯುವತಿಯ ಕುಟುಂಬದ ಜೊತೆಗೆ ರಾಜ್ಯ ಕಾಂಗ್ರೆಸ್ ಸರಕಾರ ನಿಲ್ಲಬೇಕಿತ್ತು. ಆದರೆ, ಮುಖ್ಯಮಂತ್ರಿ ಸೇರಿದಂತೆ ಬಹುತೇಕ ಸಚಿವರು ಆಕಸ್ಮಿಕ, ವೈಯಕ್ತಿಕ ಘಟನೆ ಎಂದು ಬೇಜಾಬ್ದಾರಿ ಹೇಳಿಕೆ ನೀಡುವ ಮೂಲಕ ತನಿಖೆ ಹಾದಿ ತಪ್ಪಿಸುತ್ತಿದ್ದಾರೆ. ಅಲ್ಲದೇ, ನೊಂದ ಕುಟುಂಬದ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಸ್ವತಃ ಯುವತಿಯ ಪಾಲಕರೇ ಕಾಂಗ್ರೆಸ್ಸಿನ ಧೋರಣೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದಿಂದಾಗಿ ರಾಜ್ಯದಲ್ಲಿ ಹಿಂದೂಗಳು ಭಯದಲ್ಲಿ ಜೀವನ ಮಾಡುವಂತಾಗಿದೆ. ಎಲ್ಲೆಂದರಲ್ಲಿ ದೇಶದ್ರೊಹಿ ಹೇಳಿಕೆ, ಘೋಷಣೆ ಕೇಳುತ್ತಿವೆ. ನಮ್ಮ ಯುವತಿಯರ ಮೇಲೆ ಅತ್ಯಾಚಾರ, ದೌರ್ಜನ್ಯ ಹೆಚ್ಚುತ್ತಿವೆ ಎಂದು ಅವರು ಕಿಡಿಕಾರಿದರು.

ಯುವ ಮುಖಂಡ ರಾಮನಗೌಡ ಪಾಟೀಲ ಯತ್ನಾಳ ಮಾತನಾಡಿ, ಅಮಾಯಕ‌ ಯುವತಿಯನ್ನು ಮಾಡಿರುವ ಘಟನೆ ಖಂಡನೀಯ. ಇಂಥ ಹೀನ ಕೃತ್ಯ ವಿಚಾರದಲ್ಲಿ ರಾಜಕೀಯ ಮಾಡದೆ ಕಾಂಗ್ರೆಸ್ ಸರಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ತಡೆಯಲು ರಾಜ್ಯದಲ್ಲಿ ಯೋಗಿ ಮಾದರಿಯ ಸರಕಾರದ ಅವಶ್ಯಕತೆಯಿದೆ ಎಂದು ಹೇಳಿದರು.

ಈ ವೇಳೆ ಸಂಸದ ರಮೇಶ ಜಿಗಜಿಣಗಿ, ಮಹಿಳಾ ಘಟಕದ ಅಧ್ಯಕ್ಷೆ ಸ್ವಪ್ನಾ ಕಣಮುಚನಾಳ ಮಾತನಾಡಿದರು.

ನಂತರ ಬಿಜೆಪಿ ಜಿಲ್ಲಾಡಳಿಕ್ಕೆ ಮನವಿ ಪತ್ರ ಸಲ್ಲಿಸಿದರು.

ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ಕಿರಣ ಪಾಟೀಲ, ವಿಠ್ಠಲ ಹೊಸಪೇಟ, ಮುಖಂಡರಾದ ಅರುಣ ಶಹಾಪುರ, ವಿಜುಗೌಡ ಪಾಟೀಲ, ಕಾಶುಗೌಡ ಬಿರಾದಾರ, ಸಂಜಯ ಪಾಟೀಲ ಕನಮಡಿ, ವಿವೇಕಾನಂದ ಡಬ್ಬಿ, ಶ್ರೀಹರ್ಷಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟ, ಈರಣ್ಣ ರಾವುರ, ಸಾಬು ಮಾಶ್ಯಾಳ, ಉಮೇಶ ಕೊಳಕೂರ, ಭೀಮಾಶಂಕರ ಹದನೂರ, ಗೋಪಾಲ ಘಟಕಂಬಳೆ, ಶಿಲ್ಪಾ ಕುದುರಗೊಂಡ, ಗೀತಾ ಕುಗನೂರ, ಸಿದ್ದು ಬುಳ್ಳಾ, ಗುರುಲಿಂಗಪ್ಪ ಅಂಗಡಿ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಉಮೇಶ ಕೋಳಕೂರ, ಕೃಷ್ಣಾ ಗುನ್ನಾಳಕರ, ರಾಜೇಶ ತಾವಸೆ, ಮಂಜುನಾಥ ಮೀಸೆ, ಸಿದ್ದು ಬುಳ್ಳಾ, ಬಸವರಾಜ ಹೂಗಾರ, ಶೀತಲಕುಮಾರ ಓಗಿ, ವಿಜಯ ಜೋಶಿ, ಪಾಪುಸಿಂಗ ರಜಪೂತ
ಭರತ ಕೋಳಿ, ಮಹೇಶ ಒಡೆಯರ, ಗುರು ಗಚ್ಚಿನಮಠ, ಲಕ್ಷ್ಮಿ ಕನ್ನೊಳ್ಳಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌