ಸಿಂದಗಿ ಪಟ್ಟಣದಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ನಾಯಕರಿಂದ ಮತಬೇಟೆ- ಪ್ರೊ. ರಾಜು ಆಲಗೂರ ಪರ ಮತಯಾಚನೆ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಸಾಮೂಹಿಕವಾಗಿ ಪ್ರಚಾರ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ಸಚಿವರು, ಶಾಸಕರು ಮತ್ತು ನಾಯಕರು ಮೂರನೇ ದಿನ ಸಿಂದಗಿ ಪಟ್ಟಣದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಿದರು.

ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ, ನಾ ಖಾವೂಂಗಾ ನಾ ಖಾನೆ ದೂಂಗಾ ಎಂದು ಪ್ರಾಮಾಣಿಕತೆ ಪ್ರತಿಪಾದಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಎಲೆಕ್ಟ್ರಾಲ್ ಬಾಂಡ್ ಹಗರದಲ್ಲಿ ಕಳಚಿದೆ ಎಂದು ವಾಗ್ದಾಳಿ ನಡೆಸಿದರು.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ಸಭೆಯನ್ನು ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ ಮುಂತಾದವರು ಉದ್ಘಾಟಿಸಿದರು.

ಚುನಾವಣೆ ಬಾಂಡ್ ಖರೀದಿ ಹಗರಣ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ.  ಬಿಜೆಪಿ ಸುಳ್ಳು ಭರವಸೆ ನೀಡಿ ಜನರನ್ನು ಮೋಸ ಮಾಡಿದೆ.  ಆರು ಬಾರಿ ಸಂಸದರಾಗಿದ್ದ ರಮೇಶ ಜಿಗಜಿಣಗಿ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ.  ಜಿಲ್ಲೆಯ ಸಮಸ್ಯೆಗಳ ಕುರಿತು  ಒಂದು ಬಾಿಯೂ ಸದನದಲ್ಲಿ ಜನರ ಧ್ವನಿಯಾಗಿ ಕೆಲಸ ಮಾಡಿಲ್ಲ.  ಜಿಲ್ಲೆಯ ಜನರ ಧ್ವನಿಯಾಗಲಿರುವ ಪ್ರೊ. ರಾಜು ಆಲಗೂರ ಅವರಿಗೆ ಮತ ಹಾಕಿ ಎಂದು ಅವರು ಮನವಿ ಮಾಡಿದರು.

ಸಚಿವ ಶಿವಾನಂದ ಪಾಟೀಲ ಮಾತನಾಡಿ, ಎಮ್ಮೆಗಳನ್ನು ಖರೀದಿ ಮಾಡುವಾಗ ಅದು ಹಾಲು ಕೊಡುವ ಬಗ್ಗೆ ವಿಚಾರಿಸುತ್ತೇವೆ.  ಆದರೆ, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಎರಡು ಗೊಡ್ಡು ಎಮ್ಮೆಗಳಿವೆ.  ಅವುಗಳನ್ನು ಯಾರೂ ಖರೀದಿಸಬೇಡಿ.  ಹಾಲು ಕೊಡುವ ಪ್ರೊ. ರಾಜು  ಆಲಗೂರ ಅವರಿಗೆ ಮತ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಅಮೂಲ್ಯವಾದ ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ಕಾಂಗ್ರೆಸ್ ಪಕ್ಷ ತನ್ನ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ದೇಶಕ್ಕೆ ಸ್ವಾತಂತ್ರ‍್ಯ ತಂದು ಬಲಿಷ್ಠ ಭಾರತವನ್ನು ಕಟ್ಟಿದೆ. ಜನಪರವಾದ ಅಽಕಾರ, ನುಡಿದಂತೆ ನಡೆದ, ಸದಾ ದೇಶದ ಬಡ ಜನರ ನೆರವಿಗೆ ನಿಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಮತ ಕೇಳುವ ನೈತಿಕತೆ ಇದೆ. ಈ ಬಾರಿ ನನಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು

ಇಂಡಿಯ ಶಾಸಕ ಯಶವಂತ್ರಾಯಗೌಡ ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಿಕ, ಹಾಗೂ ಶಾಸಕ ಅಶೋಕ ಮನಗೂಳಿ, ಕಾಂಗ್ರೆಸ್ ಅಭ್ಯರ್ಥಿ ಆಲಗೂರ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದ ಸಿಎಂ ಮತ್ತು ಡಿಸಿಎಂಗೆ ಹಾಗೂ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಽಕಾರಿಗಳು ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳ ಸಾವಿರಾರು ಕಾರ್ಯಕರ್ತರಿದ್ದರು.

Leave a Reply

ಹೊಸ ಪೋಸ್ಟ್‌