ನರೇಂದ್ರ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿ- ಮಹಿಳೆಯರಿಂದ ವಿಶೇಷ ಪೂಜೆ

 

ವಿಜಯಪುರ : ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ ಬಿಜೆಪಿ ಮಹಿಳಾ ಮೊರ್ಚಾ ಕಾರ್ಯಕರ್ತೆಯರು ನಗರದ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ದೇಶದ ರಕ್ಷಣೆ, ಅಭಿವೃದ್ಧಿಗಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಂಡು ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಇನ್ನಷ್ಟು ಶಕ್ತಿ, ಆಯುರಾರೋಗ್ಯ ಕರುಣಿಸಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ.  ಅವರ ನೇತೃತ್ವದಲ್ಲಿ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿದತು.  ಬಿಜೆಪಿ ಮಹಿಳಾ ಮೊರ್ಚಾದ ಜಿಲ್ಲಾಧ್ಯಕ್ಷೆ ಸಪ್ನಾ ಕಣಮುಚನಾಳ ಅವರ ನೇತೃತ್ವದಲ್ಲಿ ನೂರಾರು‌ ಸಂಖ್ಯೆಯ ಮಹಿಳಾ‌ ಕಾರ್ಯಕರ್ತೆಯರು ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಿಯಿಂದ ಪ್ರಾರ್ಥಿಸಿದರು.

ಈ ವೇಳೆ ಮಹಿಳಾ ಮೊರ್ಚಾದ ಹಲವಾರು ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌