SSLC Exam: ಬಿದರಕುಂದಿಯ ಪವಿತ್ರ ಎಂ. ಕೊಣ್ಣೂರ ಜಿಲ್ಲೆಗೆ ಪ್ರಥಮ‌ ಸ್ಥಾನ

ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಸರಕಾರಿ‌ ಶಾಲೆಯ ವಿದ್ಯಾರ್ಥಿನಿ ಪವಿತ್ರ ಮಡಿವಾಳಪ್ಪಗೌಡ ಕೊಣ್ಣೂರ ಜಿಲ್ಲೆಗೆ ಪ್ರಥಮ‌ ಸ್ಥಾನ ಪಡೆದಿದ್ದಾಳೆ.

ಸರಕಾರಿ ಆದರ್ಶ ವಿದ್ಯಾಲಯ ಆರ್.ಎಂ.ಎಸ್.ಎ ಶಾಲೆಯಲ್ಲಿ‌ ಓದುತ್ತಿರುವ ಈ ವಿದ್ಯಾರ್ಥಿನಿ 625ಕ್ಕೆ 623 ಅಂಕ ಪಡೆದು ಗಮನ ಸೆಳೆದಿದ್ದಾಳೆ.

ಸಾಧನೆ ಮಾಡಿರುವ ವಿದ್ಯಾರ್ಥಿನಿಯನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.

Leave a Reply

ಹೊಸ ಪೋಸ್ಟ್‌