ವಿದ್ಯಾರ್ಥಿಯನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಆಚರಿಸಿದ ಶರಣ ಸಂಗಮೇಶ ಬಬಲೇಶ್ವರ ದಂಪತಿ
ವಿಜಯಪುರ: ನಗರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಮತ್ತು ಶರಣ ಸಂಗಮೇಶ ಬಬಲೇಶ್ವರ ದಂಪತಿ ಬಡ ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ನಗರದಲ್ಲಿರುವ ಟ್ರಸ್ಚಿನ ಕಾರ್ಯಾಲಯದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿದ್ಯಾರ್ಥಿ ಅಶೋಕ ಜಾಧವ ಅವರನ್ನು ದತ್ತು ಪಡೆದು ಸಂಗಮಶ ಮತ್ತು ಅವರ ಪತ್ನಿ ಶ್ವೇತಾ ಬಬಲೇಶ್ವರ ದಂಪತಿ ಬಸವೇಶ್ವರರ ಆಶಯಗಳಿಗೆ ತಕ್ಕಂತೆ ಸಮಾಜಮುಖಿ ಕಾರ್ಯ ಮಾಡಿದರು. ದತ್ತು ಪಡೆಯಲು […]
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಇಂಗ್ಲಿಷ್, ಕನ್ನಡ, ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನ
ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೈರ್ಯದಿಂದ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯ. ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ‘ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಂಗ್ಲಿಷ್, ಕನ್ನಡ ಹಾಗೂ ಉರ್ದು ಮಾಧ್ಯಮಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು […]
ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಅವರು ಬಸವಣ್ಣ ಮತ್ತು ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು. ಇದಕ್ಕೂ ಮೊದಲು […]