ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.
ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಅವರು ಬಸವಣ್ಣ ಮತ್ತು ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.
ಇದಕ್ಕೂ ಮೊದಲು ನಗರದ ಬಸವೇಶ್ವರ ಚೌಕಿನಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಮತ್ತು ಎಸ್ಪಿ ಋಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹಣಮಂತ ಮಾಚಪ್ಪನವರ, ಶರಣು ಸಬರದ, ಭೀಮರಾಯ ಜಿಗಜಿನ್ನಿ, ಸುರೇಶ ದೇಸಾಯಿ, ಕೆ. ಕೆ. ಬನ್ನೆಟ್ಟಿ ಮುಂತಾದವರು ಉಪಸ್ಥಿತರಿದ್ದರು.