ಭೂತನಾಳ ಕೆರೆಗೆ ಆಲಮಟ್ಟಿ ನೀರು ಹರಿದು ಬಂತು- ವಿಜಯಪುರ ಜನರಲ್ಲಿ ಸಂತಸ ತಂತು
ವಿಜಯಪುರ: ನಗರದ ಕುಡಿಯುವ ನೀರಿನ ತೊಂದರೆ ನೀಗಿಸಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕೈಗೊಂಡ ಪ್ರಯತ್ನ ಫಲ ನೀಡಿದ್ದು, ಈಗ ಭೂತನಾಳ ಕೆರೆಗೆ ನೀರು ಹರಿದು ಬರುತ್ತಿದೆ. ಭೀಕರ ಬರ ಹಾಗೂ ಬೇಸಿಗೆ ಇರುವದರಿಂದ ಕಾಲುವೆಗಳ ಮೂಲಕ ಕುಡಿಯುವ ನೀರು ಪೂರೈಸಲು ಸಚಿವರು ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಪ್ರಾದೇಶಿಕ ಆಯುಕ್ತರಿಗೆ ಕೋರಿದ್ದರು. ಅದಕ್ಕೆ ಆಯುಕ್ತರು ಸ್ಪಂದಿಸಿದ್ದು, ಚುನಾವಣೆ ಆಯೋಗದ ಅನುಮತಿ ಪಡೆದು ನೀರು ಬಿಡುಗಡೆ […]