ಫೋರ್ಟೀಸ್ ಆಸ್ಪತ್ರೆ: ಕೊನೆ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ಯೆಮೆನ್ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್ ಡಾ. ಎಸ್. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುರೋ ಆಂಕೊಲಾಜಿಸ್ಟ್ ಡಾ. […]
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಭಗಿರಥ ಜಯಂತಿ ಆಚರಣೆ
ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಭಗಿರಥ ಜಯಂತಿಯನ್ನು ಆಚರಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಶ್ರೀ ಭಗಿರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಅಯ್ಯೂಬ ದ್ರಾಕ್ಷಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಜಕ್ಕಪ್ಪ ಯಡವೆ, […]