ಆಗಷ್ಟ 15ರೊಳಗೆ ವಿಜಯಪುರ ಸೈಕ್ಲಿಂಗ್ ವೆಲೊಡ್ರೊಮ್ ಉದ್ಘಾಟನೆ- ಕಾಮಗಾರಿ ಪೂರ್ಣಗೊಳಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಶನಿವಾರ ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ನಿರ್ಮಾಣವಾಗುರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಮತ್ತು ನಿರ್ಮಿತಿ ಕೇಂದ್ರದಡಿ ನಿರ್ಮಾಣದ ಡಾರ್ಮಿಟರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ವಿಜಯಪುರ ನಗರದ ಭೂತನಾಳ ಬಳಿ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
 ಕೊನೆಯ ಹಂತದಲ್ಲಿರುವ  ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸಂಪೂರ್ಣ ಪರಿಶೀಲನೆ ನಡೆಸಿ, ಈ ಕಾಮಗಾರಿ ಈಗಾಗಲೇ ವಿಳಂಬವಾಗಿದ್ದು,  ಬೇಗ ಪೂರ್ಣಗೊಳಿಸಿ , ಅಗಸ್ಟ್ 15 ಸ್ವತಂತ್ರ ದಿನಾಚರಣೆ ಒಳಗಾಗಿ ಉದ್ಘಾಟನೆ ಮಾಡಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಂತ್ರಿಕ ಅಧಿಕಾರಿ ಹಾಗೂ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಮಲಜಿ, ಸೈಕ್ಲಿಂಗ್ ಆಸೋಸಿಯೇಶನ್ ಅಧ್ಯಕ್ಷ ರಾಜು ಬಿರಾದಾರ್, ಕಾರ್ಯದರ್ಶಿ ಸಂಜೀವ ಫಡತರೆ, ತರಬೇತುದಾರರದ ಅಲಕಾ ಫಡತರೆ,   ಅನಂತ ದೇಸಾಯಿ,   ಎಸ್.ಬಿ ಕಡಕಲ್ ಸೇರಿದಂತೆ  ಮುಂತಾದವರು  ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌