ವಿಶ್ವದಲ್ಲಿಯೇ ಮೊದಲ ಬಾರಿಗೆ ಮೂರು ವಿಭಿನ್ನ ಕಾಯಿಲೆಗೆ ಏಕಕಾಲದಲ್ಲಿ ಸಂಕೀರ್ಣ ಶಸ್ತ್ರಚಿಕಿತ್ಸೆ: ಫೋರ್ಟಿಸ್ ವೈದ್ಯರ ತಂಡದ ಸಾಧನೆ
ಬೆಂಗಳೂರು: ವಿಶ್ವದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ. ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಇದು ವಿಶ್ವದಲ್ಲಿಯೇ ಮೊದಲ ಪ್ರಕರಣವಾಗಿದೆ. ಫೋರ್ಟಿಸ್ ಆಸ್ಪತ್ರೆಯ ಹೃದಯತಜ್ಞ ಡಾ. ವಿವೇಕ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ […]
ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ: ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ: ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಅವರು ಸಲಹೆ ಸೂಚನೆ ನೀಡಿದರು. ಮತ ಎಣಿಕೆ ಪ್ರಕ್ರಿಯೆ ಜೂ. 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ […]