ಪ್ರಜಾಪ್ರಭುತ್ವದಲ್ಲಿ ಜನರ ತೀರ್ಮಾನವೇ ಅಂತಿಮ- ಸಂಗಮೇಶ ಬಬಲೇಶ್ವರ

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಜನರ ತೀರ್ಮಾನವೇ ಅಂತಿಮ.  ಅದನ್ನು ಎಲ್ಲರೂ ಗೌರವಿಸಲೇಬೇಕು.  ವಿಜಯಪುರದಲ್ಲಿ ಪ್ರೊ. ರಾಜು ಆಲಗೂರ ಅವರ ಸೋಲನ್ನು ನಿರೀಕ್ಷಿಸಿರಲಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದೆ.  ಆದರೆ, ನಿರೀಕ್ಷಿತ ಫಲಿತಾಂಶ ಬರದಿರುವುದು ಬೇಸರ ಮೂಡಿಸಿದೆ ಎಂದು ತಿಳಿಸಿದ್ದಾರೆ. ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು […]

ಮತದಾರರ ತೀರ್ಪನ್ನು ಒಪ್ಪುತ್ತೇವೆ- ಪ್ರೊ. ರಾಜು ಆಲಗೂರ ಪರ ಮತ ಹಾಕಿದವರಿಗೆ ಧನ್ಯವಾದಗಳು- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪ್ರೊ. ರಾಜು ಆಲಗೂರ ಮತ್ತು ಕಾಂಗ್ರೆಸ್ ಪರ ಮತದಾನ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳುವುದಾಗಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಂಗಳವಾರ ಸಂಜೆ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ.  ಈ ಬಾರಿ ಚುನಾವಣೆಯಲ್ಲಿ ವಿಜಯಪುರದಲ್ಲಿ ನಾವು ಗೆಲ್ಲುವ ಬಲವಾದ ವಿಶ್ವಾಸವಿತ್ತು.  ಸಂಘಟಿತ ಪ್ರಯತ್ನ ಮಾಡಲಾಗಿತ್ತು.  ಎಲ್ಲ ಜಿ. ಪಂ. ವ್ಯಾಪ್ತಿವಾರು ಮತದಾರರನ್ನು ತಲುಪಿದ್ದೇವು.  ಇಷ್ಟಾದರೂ ಕೂಡ ಮತದರಾರು ನಮಗೆ ಆಶೀರ್ವಾದ […]

ಆಶೀರ್ವದಿಸಿದ ಮತದಾರರು, ಶ್ರಮಿಸಿದ ಸಚಿವರು, ಶಾಸಕರು, ಕಾರ್ಯಕರ್ತರಿಗೆ ಧನ್ಯವಾದಗಳು- ಪ್ರೊ. ರಾಜು ಆಲಗೂರ

ವಿಜಯಪುರ: ವಿಜಯಪುರ ಮೀಸಲು ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿದ ಎಲ್ಲ ಮತದಾರರಿಗೆ ನನ್ನ ಕೃತಜ್ಞತೆಗಳು ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಚುನಾವಣೆಯಲ್ಲಿ ನನಗೆ ಬೆಂಬಲವಾಗಿ ನಿಂತು, ಸಹಕಾರ ನೀಡಿ, ಹಗಲಿರುಳು ಶ್ರಮಿಸಿದ ಸಚಿವರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಬಾರಿ ಅತಿ ಹೆಚ್ಚು ಒಗ್ಗಟ್ಟಿನಿಂದ ಶ್ರಮಿಸಿದ್ದರು. ಅವರೆಲ್ಲರಿಗೂ ನನ್ನ ವೈಯಕ್ತಿಕ ಕೃತಜ್ಞತೆಗಳು ಎಂದು […]

ವೋಟು ಹಾಕಿದ ಮತದಾರರು, ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಸುಗಮವಾಗಿ ಚುನಾವಣೆ ನಡೆಸಿದ ಅಧಿಕಾರಿಗಳಿಗೆ ಧನ್ಯವಾದಗಳು- ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವೋಟು ಹಾಕಿದ ಮತದಾರರು, ಕೆಲಸ ಮಾಡಿದ ಕಾರ್ಯಕರ್ತರು, ಸುಸೂತ್ರವಾಗಿ ಚುನಾವಣೆ ನಡೆಸಿದ ಅಧಿಕಾರಿಗಳಿಗೆ ಧನ್ಯವಾದ ಹೇಳುವುದಾಗಿ ಸತತ ಏಳನೇ ಬಾರಿಗೆ ಸಂಸದರಾಗಿ ಆಯ್ಗೆಯಾಗಿರುವ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಮಂಗಳವಾರ ಸಂಜೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಂದ ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನನ್ನ ಪಕ್ಷದ ಕಾರ್ಯಕರ್ತರು ಉರಿ ಬಿಸಿಲಿನಲ್ಲಿ ಚಪ್ಪಲಿ ಹರಿದುಕೊಂಡು, ಅಂಗಿ ಹರಿದುಕೊಂಡು ಶ್ರಮಪಟ್ಟು ನನ್ನನ್ನು ಗೆಲ್ಲಿಸಿದ್ದಾರೆ. […]