ಆಶೀರ್ವದಿಸಿದ ಮತದಾರರು, ಶ್ರಮಿಸಿದ ಸಚಿವರು, ಶಾಸಕರು, ಕಾರ್ಯಕರ್ತರಿಗೆ ಧನ್ಯವಾದಗಳು- ಪ್ರೊ. ರಾಜು ಆಲಗೂರ

ವಿಜಯಪುರ: ವಿಜಯಪುರ ಮೀಸಲು ಲೋಕಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿದ ಎಲ್ಲ ಮತದಾರರಿಗೆ ನನ್ನ ಕೃತಜ್ಞತೆಗಳು ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ. 

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಚುನಾವಣೆಯಲ್ಲಿ ನನಗೆ ಬೆಂಬಲವಾಗಿ ನಿಂತು, ಸಹಕಾರ ನೀಡಿ, ಹಗಲಿರುಳು ಶ್ರಮಿಸಿದ ಸಚಿವರು, ಶಾಸಕರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಬಾರಿ ಅತಿ ಹೆಚ್ಚು ಒಗ್ಗಟ್ಟಿನಿಂದ ಶ್ರಮಿಸಿದ್ದರು. ಅವರೆಲ್ಲರಿಗೂ ನನ್ನ ವೈಯಕ್ತಿಕ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ ಹಾಗೂ ಗೆಲವು ಸಾಧಿಸಿದ ರಮೇಶ ಜಿಗಜಿಣಗಿ ಅವರಿಗೆ ಅಭಿನಂದಿಸುತ್ತೇನೆ. ರಮೇಶ ಜಿಗಜಿಣಗಿಯವರು ಮಾಡುವ ಎಲ್ಲ ಉತ್ತಮ ಕಾರ್ಯಗಳಿಗೆ ನಾನು ಸಹಕಾರ ನೀಡುತ್ತೇನೆ ಎಂದು ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌