ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ -2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು, ಪ್ರಯೋಗಾಲಯ, ನರ್ಸಿಂಗ್ ಹೋಮ್ ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ […]

ಎರಡೂ ಕಿವಿಗಳಲ್ಲೂ ಶ್ರವಣದೋಷ: ನೈಜೀರಿಯನ್ ಯುವತಿಗೆ ಯಶಸ್ವಿ ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ನಡೆಸಿದ ಫೋರ್ಟಿಸ್‌ ವೈದ್ಯರು

ಬೆಂಗಳೂರು: ವೈರಲ್‌ ಜ್ವರದ ಬಳಿಕ ಎರಡೂ ಕಿವಿಗಳು ಶ್ರವಣದೋಷಕ್ಕೆ ಒಳಗಾಗಿದ್ದ ನೈಜೀರಿಯಾ ಮೂಲದ 23 ವರ್ಷದ ಯುವತಿಗೆ ಏಕಕಾಲದಲ್ಲಿ ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಮೂಲಕ ಯುವತಿಗೆ ಎರಡು ಶ್ರವಣ ಸಾಧನಗಳನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಅಳವಡಿಸಿದ್ದಾರೆ. ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಹಿರಿಯ ಸಲಹೆಗಾರ ಡಾ. ಎಚ್. ಕೆ. ಸುಶೀನ್ ದತ್ ಹಾಗೂ ತಜ್ಞರ ಆರೈಕೆಯಲ್ಲಿ ಈ ಸಂಕೀರ್ಣ ಕಾರ್ಯವಿಧಾನವನ್ನು 9 ಗಂಟೆಗಳಲ್ಲಿ ಪೂರ್ಣಗೊಳಿಸಲಾಯಿತು. ಈ ಕುರಿತು […]

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿಎಂ ಎಸ್. ಸಿದ್ಧರಾಮಯ್ಯ ಸ್ಪಷ್ಟ ಸೂಚನೆ

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಅವರು‌ ಸೂಚಿನೆ ನೀಡಿದರು. ಚುನಾವಣೆ ನೀತಿ […]