ಮುಂಗಾರು ಹಂಗಾಮಿನಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ಸಮರ್ಪಕ ವಿತರಣೆ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ .ಪಾಟೀಲ
ವಿಜಯಪುರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 711370 ಹೆಕ್ಟೇರ್ ಗುರಿಗೆ 19567 ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ […]
ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ನೇಮಕ
ವಿಜಯಪುರ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿಗೆ ಸತಕಾರ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ವಿಜಯಪುರದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರನ್ನು ನೇಮಕ ಮಾಡಲಾಗಿದೆ. ಅಮ್ಮ ಚಾರಿಟೆಬಲ್ ಸಂಸ್ಥೆಯ ಸಙಸ್ಥಾಪಕ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸಂಗಮೇಶ.ಅಪ್ಪಾಸಿ ಬಬಲೇಶ್ವರ ಅವರು ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.