ಮುಂಗಾರು ಹಂಗಾಮಿನಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ಸಮರ್ಪಕ ವಿತರಣೆ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ .ಪಾಟೀಲ

ವಿಜಯಪುರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 711370 ಹೆಕ್ಟೇರ್ ಗುರಿಗೆ 19567 ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದ್ದಾರೆ.   

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ, ಬೀಜ ವಿತರಣೆಯಲ್ಲಿ ಯಾವುದೇ ಗೊಂದಲಗಳಾಗದAತೆ ನೋಡಿಕೊಂಡು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ವಿತರಣೆ ಸಂದರ್ಭದಲ್ಲಿ ಜನಜಂಗುಳಿಯಾಗದಂತೆ ನೋಡಿಕೊಂಡು ಪೂರ್ವಸಿದ್ಧತೆಯೊಂದಿಗೆ ವಿತರಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 7720.80 ಕ್ವಿಂ. ವಿವಿಧ ಬಿತ್ತನೆ ಬೀಜ ವಿತರಿಸಲಾಗಿದೆ. ಬೀಜದ ಯಾವುದೇ ಕೊರತೆ ಇಲ್ಲ. 3203.72 ಕ್ವಿಂಟಾಲ್ ನಷ್ಟು ಜಿಲ್ಲೆಯ ವಿವಿಧ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದ್ದು, ಬೇಡಿಕೆಗೆ ತಕ್ಕಂತೆ ಸರಬರಾಜು ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.

ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು.

ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಟಿಸಿ ಸುಟ್ಟ ನಂತರ ತಕ್ಷಣವೇ ಮರು ಸ್ಥಾಪನೆಗೆ ಕ್ರಮ ವಹಿಸಬೇಕು. ಆದ್ಯತೆ ಮೇಲೆ ಮರು ಸ್ಥಾಪಿಸಲು ಕ್ರಮ ವಹಿಸಬೇಕು.  ರೈತರ ಬೇಡಿಕೆಯನುಸಾರವಾಗಿ ವಿಳಂಬ ಮಾಡದೇ ಸಕಾಲದಲ್ಲಿ ಟಿಸಿ ಒದಗಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ವಿಜಯಪುರ ನಗರದ ಸ್ಕೂಲ್ ನಂ.4 ಶಾಲೆಗೆ ನಾಳೆಯೇ ಭೇಟಿ ನೀಡಿ, ಕಟ್ಟಡ, ಕೊಠಡಿಗಳ ವ್ಯವಸ್ಥೆ, ಪೀಠೋಪಕರಣ ವ್ಯವಸ್ಥೆ ಸೇರಿದಂತೆ   ಶಾಲಾ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಅವರು ಸೂಚನೆ ನೀಡಿದರು.

ನಗರದಲ್ಲಿ ಪುನಶ್ಚೇತನಗೊಳಿಸಲಾದ ಐತಿಹಾಸಿಕ ತೆರೆದ ಭಾವಿಗಳ ನೀರನ್ನು ಗೃಹಬಳಕೆ ಉಪಯೋಗಿಸಲು ಕ್ರಮ ಕೈಗೊಳ್ಳಬೇಕು.  ಇದರಿಂದ ಕುಡಿಯುವ ನೀರಿನ ಪೂರೈಕೆಯ ಒತ್ತಡ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗಲಿದೆ.  ಆಗ ಈ ಭಾವಿಗಳ ನೀರನ್ನು ಗೃಹೋಪಯೋಗಿಗೆ ಬಳಸಲು ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಹಲವು ನೀರಾವರಿ ಯೋಜನೆಗಳಿಂದ ಅಂತರ್ಜಲಮಟ್ಟ ಹೆಚ್ಚಾಗಿದೆ.  ಇದರಿಂದ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.  ಕೆರೆ ತುಂಬುವ ಯೋಜನೆ ಕೂಡ ಫಲಪ್ರದವಾಗಿದ್ದು, ಹಳ್ಳಗಳ ಮೂಲಕ ಬಾಂದಾರ ನಿರ್ಮಿಸಿ ರೈತರಿಗೆ ಮತ್ತಷ್ಟು ಅಂತರ್ಜಲ ಹೆಚ್ಚಿಸಲು ಹಳ್ಳಗಳ ಸಮೀಕ್ಷೆ ಕಾರ್ಯ ಕೈಗೊಂಡು  ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ,ಹಳ್ಳಗಳ ಮಾಹಿತಿ ಕ್ರೋಢಿಕರಿಸಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ನೀರಾವರಿ ಯೋಜನೆಗಳಿಂದ  ಅಂತರ್ಜಲ ಹೆಚ್ಚಾಗಿರುವುದರಿಂದ  ಇಂತಹ ಭೀಕರ ಬರಗಾಲದ ಪರಿಸ್ಥಿತಿಯಲ್ಲಿಯೂ ಸಹ ಜಿಲ್ಲೆಯಲ್ಲಿ  ಅತ್ಯಂತ ಕಡಿಮೆ ಟ್ಯಾಂಕರ್‌ಗಳನ್ನು  ಬಳಸಿ ಕುಡಿಯುವ ನೀರು ಒದಗಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಟ್ಯಾಂಕರಗಳ ಮೂಲಕ ನೀರು ಸರಬರಾಜುವಿಗೆ ಇತಿಶ್ರೀ ಹಾಡಲು ಸೂಕ್ತ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಧೋಂಡಿಬಾ  ಕಟಕದೊಂಡ, ರಾಜುಗೌಡ ಪಾಟೀಲ, ವಿಧಾನ ಪರಿಷತ ಶಾಸಕರಾದ ಪ್ರಕಾಶ ರಾಠೋಡ, ಪ್ರಕಾಶ ಹುಕ್ಕೇರಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಎಸ್ಪಿ ಸೋನಾವಣೆ ಋಷಿಕೇಶ ಭಗವಾನ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಕೊಟಗಸ್ತಿ ಹಾಗೂ ನೂರಅಹ್ಮದ ಅತ್ತಾರ, ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌