ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ನೇಮಕ

ವಿಜಯಪುರ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿಗೆ ಸತಕಾರ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ವಿಜಯಪುರದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರನ್ನು ನೇಮಕ ಮಾಡಲಾಗಿದೆ.  ಅಮ್ಮ ಚಾರಿಟೆಬಲ್ ಸಂಸ್ಥೆಯ ಸಙಸ್ಥಾಪಕ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಸಂಗಮೇಶ.ಅಪ್ಪಾಸಿ ಬಬಲೇಶ್ವರ ಅವರು ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

Leave a Reply

ಹೊಸ ಪೋಸ್ಟ್‌