ವಿಶ್ವ ರಕ್ತದಾನ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಜಯಪುರ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗಶಾಸ್ತ್ರ ವಿಭಾಗದ ವತಿಯಿಂದ ಶುಕ್ರವಾರ ಬೀದಿ ನಾಟಕದ ಮೂಲಕ ರಕ್ತದಾನದ ಮಹತ್ವದ ಕುರಿತು ಜನ ಜನಜಾಗೃತಿ ಮೂಡಿಸಲಾಯಿತು  

ರಕ್ತ ದಾನ ಜಾಗೃತಿ ಮತ್ತು ರಕ್ತ ದಾನಿಗಳಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮ ಘೋಷಣೆಯಡಿ ನಗರದ ಬಿ.ಎಲ್‌.ಡಿ.ಇ ಆಸ್ಪತ್ರೆಯ ಎದುರು, ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂಭಾಗ, ಗಾಂಧಿ ಚೌಕ್ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.  ಈ ಬೀದಿ ನಾಟಕದಲ್ಲಿ ಪಾಲ್ಗೊಂಡ ಎಂಬಿಬಿಎಸ್ ವಿದ್ಯಾರ್ಥಿಗಳು ರಕ್ತದಾನದ ಕುರಿತು ಜಾಗೃತಿ ಮತ್ತು ರಕ್ತದಾನಿಗಳಿಗೆ ಧನ್ಯವಾದ ಅರ್ಪಿಸಿದರು.  ಅಲ್ಲದೇ, ರಕ್ತದಾನಿಗಳಿಗೆ ಧನ್ಯವಾದ ಪತ್ರಗಳನ್ನು ವಿತರಿಸಿದರು.

ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ವಿಜಯಪುರ ನಗರದ ಗಾಂಧಿಚೌಕಿನಲ್ಲಿ ಬೀದಿ ನಾಟಕದ ಮೂಲಕ ರಕ್ತದಾನದ ಮಹತ್ವ ತಿಳಿಸಿಕೊಟ್ಟರು.

ಇದೇ ವೇಳೆ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಹಾಗೂ ಬೀದಿ ನಾಟಕದ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ರಕ್ತದ ಗುಂಪು ಪರೀಕ್ಷೆಯನ್ನು ಉಚಿತವಾಗಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಂಶುಪಾಲ ಡಾ. ಅರವಿಂದ ಪಾಟೀಲ, ರೋಗಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುರೇಖಾ ಹಿಪ್ಪರಗಿ, ರಕ್ತಕೇಂದ್ರದ ಅಧಿಕಾರಿ ಡಾ. ಪ್ರಕಾಶ ಪಾಟೀಲ, ಡಾ. ಮಮತಾ ಕೆ. ಡಾ.ವಿಜಯಲಕ್ಷ್ಮಿ ಪಾಟೀಲ, ಡಾ. ಸತೀಶ ಅರಕೇರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌