TET Exam: ಜೂ. 30ರಂದು ಶಿಕ್ಷಕರ ಅರ್ಹತೆ ಪರೀಕ್ಷೆ- ವ್ಯವಸ್ಥಿತವಾಗಿ ನಿರ್ವಹಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ. 30 ರಂದು ರವಿವಾರ ನಡೆಯಲಿದ್ದು ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಬೂಬಾಲನ್ ಸೂಚನೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಒಟ್ಟು 43 ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 111787 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆ. 9.30ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು ನಡೆಯಲಿವೆ.  ಅಭ್ಯರ್ಥಿಗಳು ಬೆ. 9ಕ್ಕೆ ಬಂದು ವರದಿ ಮಾಡಿಕೊಳ್ಳಬೇಕು ಎರಡನೇ ಅವಧಿಯ ಪರೀಕ್ಷೆ ಮ. 2ಕ್ಕೆ ಪ್ರಾರಂಭವಾಗಲಿದೆ.  ಅಭ್ಯರ್ಥಿಗಳು ಮ. 1.30ಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ವಿಜಯಪುರದಲ್ಲಿ ಜೂ. 30 ರಂದು ಶನಿವಾರ ಶಿಕ್ಷಕರ ಅರ್ಹತೆ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸಿ ಟಿ. ಭೂಬಾಲನ್ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

 

ಪರೀಕ್ಷೆಯ ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.  ಪರೀಕ್ಷೆ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು.  ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಖ್ಯದ್ವಾರದೊಳಗೆ ಬರುವಾಗ ಮೊಬೈಲ್‌ ಪೋನ್, ಸ್ಮಾರ್ಟ್ ಫೋನ, ಬ್ಯಾಗ್ ಹಾಗೂ ಇತರೇ ವಸ್ತುಗಳನ್ನು ಒಳಗಡೆ ತೆಗೆದುಕೊಂಡು ಬರಲು ಅವಕಾಶ ಇರುವುದಿಲ್ಲ.  ಅಭ್ಯರ್ಥಿ ಒಳಗಡೆ ಹೋದ ನಂತರ ಮತ್ತೊಮ್ಮೆ ತಪಾಸಣೆ ನಡೆಸಬೇಕು.  ಪರೀಕ್ಷೆ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು.  ಪರೀಕ್ಷೆಗೆ ನಿಯೋಜನೆ ಮಾಡಲಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಹಳ ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಬೇಕು.  ಯಾವುದೇ ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.  ಕೆಲಸದಲ್ಲಿ ನಿರ್ಲಕ್ಷ ವಹಿಸಿದರೆ ಕೊಠಡಿಯ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.  ಕರ್ತವ್ಯ ನಿರ್ವಹಿಸುವವರು ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸಿಬೇಕು.  ಅವರನ್ನು ಹೊರತು ಪಡಿಸಿ ಯಾವುದೇ ವ್ಯಕ್ತಿಗಳಿಗೆ ಅವಕಾಶ ನೀಡದಂತೆ ಟಿ. ಭೂಬಾಲನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ನಿಯಮಗಳನ್ನು ಪಾಲಿಸಿಕೊಂಡು ಜವಾಬ್ದಾರಿಯುತವಾಗಿ  ಕರ್ತವ್ಯಗಳನ್ನು ನಿರ್ವಹಿಸಬೇಕು.  ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ತಾವೆಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀಕ್ಷೆ ನಡೆಯುವ ದಿನ ಪರೀಕ್ಷೆ ಕೇಂದ್ರಗಳ ಸುತ್ತಲೂ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಅಲ್ಲದೇ, ಎಲ್ಲ ಪರೀಕ್ಷೆ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನನು ನಿಯೋಜಿಸಲಾಗುವುದು.  ಅವಶ್ಯವಿದ್ದರೆ ಹೆಚ್ಚುವರಿ ಸಿಬ್ಬಂದಿಯ ವ್ಯವಸ್ಥೆ ಮಾಡಲಾಗುವುದು.  ಯಾವುದೇ ತೊಂದರೆಗಳಿದ್ದರೆ ತಮ್ಮ್ಮನ್ನು ಸಂಪರ್ಕಿಸುವಂತೆ ಅವರು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ, ಖಜಾನೆ ಉಪನಿರ್ದೇಶಕ ಹನಮಂತ ಕಾಲತಿಪ್ಪಿ, ಕೆ. ಎಸ್. ಆರ್. ಟಿ.  ಸಿ ಅಧಿಕಾರಿಗಳು, ಬಿಇಒಗಳು, ಪ್ರಾಚಾರ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌