ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಪತಿಗಳೂ ಆಗಿರುವ ಎಂ. ಬಿ. ಪಾಟೀಲ ಅವರು, ಕೊರೊನಾ ಸಂದರ್ಭದಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಕಡಿಮೆ ದರದಲ್ಲಿ ಚಿಕಿತ್ಸೆ ಮತ್ತು ಬಹಳಷ್ಟು ಜನರಿಗೆ ಉಚಿತ ಚಿಕಿತ್ಸೆ ಒದಗಿಸಿ ಮಾದರಿ ಕಾರ್ಯ ಮಾಡಿದ್ದರು. ರೋಗಿಗಳ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಆಸ್ಪತ್ರೆ ಈಗ ಈಗ ಅವರ ಸೂಚನೆಯಂತೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಪಯೋಗವಾಗಲು ಮತ್ತೋಂದು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯಂತೆ ಆಸ್ಪತ್ರೆಗೆ ಹೆರಿಗೆಗೆ ಬರುವ ಗರ್ಭಿಣಿ ಮಹಿಳೆಯರಿಗೆ ಸಾಮಾನ್ಯ ವಾರ್ಡುಗಳಲ್ಲಿ ಹೊರ ಮತ್ತು ಒಳರೋಗಿ ನೊಂದಣಿ ಉಚಿತವಾಗಿದೆ. ಅಲ್ಲದೇ, ಈ ವಾರ್ಡುಗಳಲ್ಲಿ ದಾಖಲಾಗುವು ಗರ್ಭಿಣಿಯರಿಗೆ ಪ್ರಾಥಮಿಕ ರಕ್ತ ತಪಾಸಣೆಗಳು, USG(CBC, RBS, Blood Group, HIV and HBSG, Urine Routine, ECG), ಸಾಮಾನ್ಯ ಹೆರಿಗೆ ಮತ್ತು ಸಿಝೆರಿಯನ್ ಮೂಲಕ ಹೆರಿಗೆಗಳು ಉಚಿತವಾಗಿರಲಿವೆ. ಅಲ್ಲದೇ, ಈ ಹೆರಿಗೆಗೆ ಸಂಬಂಧಿಸಿದ ಔಷಧಿಗಳು, ಅಲ್ಪೋಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಉಚಿತವಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.
ಹೆರಿಗೆಗೆ ದಾಖಲಾಗುವ ಮಹಿಳೆಯರು ಆಸ್ಪತ್ರೆಗೆ ಬರುವ ಮಹಿಳೆಯರು ಆಧಾರ ಕಾರ್ಡ್ ತರುವುದು ಕಡ್ಡಾಯವಾಗಿದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ ಗುಣಮಟ್ಟದಲ್ಲಿ ಉಚಿತ ಚಿಕಿಕ್ಸೆ ನೀಡುವ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಜಾರಿ ಮಾಡಲಾಗಿದೆ. ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲಿನ ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಡಾ. ರಾಜೇಶ ಹೊನ್ನುಟಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.