ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇಂಡಿ ತಾಲೂಕಿನ ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. 

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು.  ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಮೇತ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನ ಉಪನ್ಯಾಸಕ ಡಾ. ರಮೇಶ ತೇಲಿ ಅವರು ಉಪನ್ಯಾಸ ನೀಡಿದರು.

ವಿಜಯಪುರ ಜಿಲ್ಲೆಯ ಝಳಕಿ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ ಮೇತ್ರಿ ವಿಶೇಷ ಉಪನ್ಯಾಸ ನೀಡದರು..

ಹಲಸಂಗಿ ಗೆಳೆಯರು 800 ತ್ರಿಪದಿ, ಗರತಿ ಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದಾರೆ.  ತಂದೆ ತಾಯಿಯ ಪ್ರೀತಿ ಮತ್ತು ದಾಂಪತ್ಯ ಜೀವನದ ಮೌಲ್ಯ ಕುರಿತು ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಸಾಹಿತ್ಯದ ಮೂಲಕ ನೀಡಿದ ಕೊಡುಗೆಗಳು, ಮಧುರ ಚೆನ್ನರ ಜೀವನ ಹಾಗೂ ಮಾತಾ ಅರವಿಂದರ ದಾರಿಯ ಬಗ್ಗೆ ಪ್ರೊ. ಡಿ. ಭಿ. ಭಜಂತ್ರಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಆರ್. ಎನ್. ಶಿಂಪಿ, ಜೆ. ಎಸ್. ಗಲಗಲಿ, ಚಿದಾನಂದ ಗಲಗಲಿ ಮುಂತಾದವರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮತ್ತು ಹಲಸಂಗಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಸಂತೋಷ ಭೋವಿ ಸ್ವಾಗತಿಸಿದರು.ವೀರೇಶ ವಾಲಿ ಮತ್ತು ತಂಡದವರು ಜಾನಪದ ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.  ರವಿಕುಮಾರ ಅರಳಿ ನಿರೂಪಿಸಿದರು.  ಪ್ರೊ. ಸಂಗಮೇಶ ಹಿರೇಮಠ ವಂದಿಸಿದರು.

Leave a Reply

ಹೊಸ ಪೋಸ್ಟ್‌