ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರಿಂದ ರಕ್ತದಾನ
ವಿಜಯಪುರ: ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ರಕ್ತ ನಿಧಿ ಕೇಂದ್ರದಲ್ಲಿ ಸೋಮವಾರ ವೈದ್ಯರಿಂದ ರಕ್ತದಾನ ಶಿಬಿರ ನಡೆಯಿತು. ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ್ರ ಚಿಕಿತ್ಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಸುಮಾರು 15 ಜನ ವೈದ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಎಂ. ಬಿ. […]
ಗ್ರಾ. ಪಂ ಶೇ. 10ರಷ್ಟು ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಿ- ಜಿ, ಪಂ ಸಿಇಒ ರಿಷಿ ಆನಂದ
ವಿಜಯಪುರ: ಗ್ರಾ. ಪಂ ಗಳಿಂದ ಪ್ರಸ್ತುತ ಶೇ.4 ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ. 10ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಸಂಗ್ರಹವಾದ ತೆರಿಗೆಯಲ್ಲಿ ಶೇ.6ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು […]
ಗಾಂಧೀಜಿಯವರ ಗ್ರಾಮ ಸ್ವರಾಜ್ಯ ನನಸು ಮಾಡಲು ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿವೆ- ಶ್ರೀ ನರೇಶಾನಂದ ಸ್ವಾಮೀಜಿ
ವಿಜಯಪುರ: ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ನನಸು ಮಾಡಲು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ(ಎನ್.ಎಸ್.ಎಸ್.)ಗಳು ಸಹಕಾರಿಯಾಗಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು […]