ಗಾಂಧೀಜಿಯವರ ಗ್ರಾಮ ಸ್ವರಾಜ್ಯ ನನಸು ಮಾಡಲು ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿವೆ- ಶ್ರೀ ನರೇಶಾನಂದ ಸ್ವಾಮೀಜಿ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ನನಸು ಮಾಡಲು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ(ಎನ್.ಎಸ್.ಎಸ್.)ಗಳು ಸಹಕಾರಿಯಾಗಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದ್ದಾರೆ.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಇಂಥ ಶಿಬಿರಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ವಿಕಸನ, ಶಿಸ್ತು, ಪರಿಸರ ಸಂರಕ್ಷಣೆ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಅಲ್ಲದೇ, ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಈ ಶಿಬಿರಗಳು ಅನುಕೂಲವಾಗಿವೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಚಾರ್ಯೆ ಡಾ. ಆರ್. ಎಂ. ಮಿರ್ದೆ ಮಾತನಾಡಿ, ಎನ್. ಎಸ್. ಎಸ್ ನ ಧ್ಯೇಯೋದ್ದೇಶಗಳು, ಪರಿಸರ ಸಂರಕ್ಷಣೆ, ನೈರ್ಮಲ್ಯ, ವ್ಯಕ್ತಿತ್ವ ವಿಕಸನ, ಸೃಜನಶೀಲತೆ ಮತ್ತು ಕ್ರೀಯಾಶೀಲತೆ ಬೆಳೆಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯದ ಹೊರತಾದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವಾಂಗೀಣ ಅಭಿವೃದ್ಧಿಗೆ ಇಂಥ ಶಿಬಿರಗಳಿ ಅವಕಾಶ ಕಲ್ಪಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಇಂಥ ಶಿಬಿರಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ನಿರ್ದೇಶಕ ಡಾ. ಪಿ. ಎಸ್. ಪಾಟೀಲ, ನ್ಯಾಕ್ ಸಂಯೋಜಕ ಡಾ. ಕೆ. ಮಹೇಶಕುಮಾರ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಮಿಲನ ರಾಠೋಡ, ಡಾ. ತರನ್ನುಮ್ ಜಬೀನಖಾನ್, ಡಾ. ಕೃಷ್ಣಾ ಮಂಡ್ಲಾ, ಬೊಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌