ಗ್ರಾ. ಪಂ ಶೇ. 10ರಷ್ಟು ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಿ- ಜಿ, ಪಂ ಸಿಇಒ ರಿಷಿ ಆನಂದ

ವಿಜಯಪುರ: ಗ್ರಾ. ಪಂ ಗಳಿಂದ ಪ್ರಸ್ತುತ ಶೇ.4 ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ. 10ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಸಂಗ್ರಹವಾದ ತೆರಿಗೆಯಲ್ಲಿ ಶೇ.6ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು ಹಾಗೂ ದಿನ ಪತ್ರಿಕೆಳಿಗೆ ಅನುದಾನ ಕಾಯ್ದಿರಿಸಬೇಕು. ಗ್ರಾಮದಲ್ಲಿ ಕುಡಿಯುವ ನೀರು ಇತರೆ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಬೇಕು. ತಮ್ಮ ನಿಯೋಜಿತ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ನಾನಾ ಯೋಜನೆಗಳ ಪ್ರಗತಿಯ ಗುರಿ ಸಾಧಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿ. ಪಂ. ಸಿಇಓ ರಿಷಿ ಆನಂದ ಅವರು ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ನಾನಾ ಯೋಜನೆಗಳಾದ ಮಹಾತ್ಮಗಾಂಧಿ ನರೇಗಾ ಯೋಜನೆ, ವಸತಿ ಯೋಜನೆ, ಸ್ವಚ್ಚ ಭಾರತ ಮಿಷÀನ್, ಸಕಾಲ, ಆಸ್ತಿಗಳ ಸಮೀಕ್ಷೆ, ಗ್ರಂಥಾಲಯಗಳ ಡಿಜಿಟಲೀಕರಣ, ಇ-ಸ್ವತ್ತು ಹಾಗೂ ತೆರಿಗೆ ವಸೂಲಾತಿ ಹಾಗೂ ನಾನಾ ವಿಷÀಯಗಳ ಕುರಿತು ಪ್ರಗತಿ ಅವರು ಪರಿಶೀಲನೆ ನಡೆಸಿದರು.

ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತೋಟಗಾರಿಕೆ ಸಹಯೋಗದಲ್ಲಿ ಲಿಂಬೆ ಸಸಿ ನಾಟಿ ಮಾಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಿ, ಕಾಮಗಾರಿ ಅನುಷ್ಠಾನ ಸಂಬAಧಿಸಿದAತೆ ನರೇಗಾ ಯೋಜನೆಯ ಸಹಾಯಧನ, ಸಸಿಗಳ ಲಭ್ಯತೆ, ಸಸಿಗಳ ನಾಟಿ ಹಾಗೂ ರೈತರಿಗೆ ದೊರೆಯುವ ಲಾಭಾಂಶÀ ಕುರಿತಾಗಿ ರೈತರೊಂದಿಗ ಸಂವಾದ ನಡೆಸಿದರು.  ಲಿಂಬೆ ಬೆಳೆಗೆ ತಗಲುವ ರೋಗಬಾಧೆ ನಿಯಂತ್ರಿಸಲು ರೈತರಿಗೆ ಅಗತ್ಯ ಸಲಹೆ ನೀಡಲು ಸ್ಥಳದಲ್ಲಿದ್ದ ತೋಟಗಾರಿಕೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಿರ್ಮಾಣವಾದ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಯಾವುದೇ ದುರಸ್ತಿ ಕಾಮಗಾರಿಳಿದ್ದರೆ ಆದ್ಯತೆ ಮೇರೆಗೆ ಮುಂದಿನ ಹದಿನೈದು ದಿನಗಳಲ್ಲಿ ಪೂರ್ಣಗೊಳಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರಾನಾಥ ರಾಠೋಡ ಅವರಿಗೆ ಸೂಚನೆ ನೀಡಿದರು. ನವೀಕರಣಗೊಳ್ಳುತ್ತಿರುವ ಕನ್ನೊಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿಗೆ ವೇಗ ನೀಡಿ ಆದಷ್ಟು ಬೇಗ ಪೂರ್ಣಗೊಳಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ರಿಶಿ ಆನಂದ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಪಂಚಾಯಿತಿ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಎನ್. ಎಮ್ ಗಬಸಾವಳಗಿ, ಸಿಂದಗಿ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ ಅಗ್ನಿ, ಆಲಮೇಲ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಫರೀದಾಬಾನು ಪಠಾಣ, ಜಿ. ಪಂ. ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಸಿಂದಗಿ ತಾ. ಪಂ. ಸಹಾಯಕ ನಿರ್ದೇಶಕರು ನಿತ್ಯಾನಂದ ಯಲಗೋಡ, ಆಲಮೇಲ ತಾಲೂಕಿನ ಸಹಾಯಕ ನಿರ್ದೇಶಕ ಸಿದ್ದು ಅಂಕಲಗಿ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್  ಜಿ. ವೈ. ಮುರಾಳ, ಕೆ.ಆರ್‌.ಐ.ಡಿ.ಎಲ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜಶೇಖರ ಜೊತಗೊಂಡ, ಕನ್ನೊಳ್ಳಿ ಪಿಡಿಓ ಪ್ರಕಾಶ ನಾಯಕ, ಗಬಸಾವಳಗಿ ಪಿಡಿಓ ಜ್ಯೋತಿ ಶೇಗಾವಿ, ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌