ವಿಶ್ವವಿಖ್ಯಾತ ಗೋಳಗುಮ್ಮಟಕ್ಕೆ ಸೌರಶಕ್ತಿ ವಿದ್ಯುತ್ ದೀಪಾಂಲಕಾರಕ್ಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ವಿಶ್ವವಿಖ್ಯಾತ ಗೋಳಗುಮ್ಮಟಕ್ಕೆ ಸೌರಶಕ್ತಿ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೋಳಗುಮ್ಮಟಕ್ಕೆ ಭೇಟಿ ನೀಡಿದ ಅವರು, ಪ್ರವಾಸಿಗರ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳು ಮತ್ತು ದೀಪಾಲಂಕಾರ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿಖ್ಯಾತ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ.  ನೋಡುಗರಿಗೆ ಆಕರ್ಷಕಗೊಳಿಸಲು ಸ್ಮಾರಕದ ನಾಲ್ಕೂ ದಿಕ್ಕಿನಲ್ಲಿ ದೀಪಾಂಲಕಾರ ಮಾಡಬೇಕು.  ರಿನಿವ್ ಎನರ್ಜಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಸಿಎಸ್‍ಆರ್ ಅನುದಾನದಡಿ ಸೌರಶಕ್ತಿ ಅಳವಡಿಸಲಾಗುತ್ತಿದ್ದು, ಈ ಸೌರಶಕ್ತಿ ಖಾಸಗಿ ಕಂಪನಿಯವರು ಅಲ್ಲಿ ಉತ್ಪಾದನೆಯಾಗುವ ವಿದ್ಯುತ್‍ನ್ನು ದೀಪಾಲಂಕಾರ, ವಸ್ತು ಸಂಗ್ರಹಾಲಯ, ಅಲ್ಲಿರುವ ಕಚೇರಿಗೆ ಬಳಸಿಕೊಳ್ಳಬೇಕು.  ಉಳಿದ ವಿದ್ಯುತ್ ಹೆಸ್ಕಾಂಗೆ ಪಾವತಿಯಾಧಾರದ ಮೇಲೆ  ವಿತರಣೆಗೆ ಕ್ರಮ ಕೈಗೊಳ್ಳಲು ತ್ವರಿತ ಕ್ರಿಯಾಯೋಜನೆ ಸಿದ್ಧಪಡಿಸಿ ಆಗಸ್ಟ್ ಮಧ್ಯಾವಧಿಯವರೆಗೆ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಜಯಪುರದ ಐತಿಹಾಸಿಕ ಗೋಳಗುಮ್ಮಟಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಮಾರಕದ ಹಿಂದೆ ಖಾಲಿ ಇರುವ 10 10 ಎಕರೆ ಜಾಗೆಯಲ್ಲಿ ಗಿಡಗಳನ್ನು ನೆಟ್ಟು ಹಸರಿಕರಣ ಮಾಡಬೇಕು. ದೇಶ-ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಗೋಲಗುಂಬಜ್‍ನಲ್ಲಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಕ್ಯಾಂಟಿನ್, ಟಿಕೆಟ್ ಕೌಂಟರ್‍ಗಳನ್ನು ವ್ಯವಸ್ಥಿತವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಅಧಿಕಾರಿ ವಿಜಯಕುಮಾರ, ವಿಜಯಪುರ ವಲಯದ ಅರಣ್ಯಾಧಿಕಾರಿ ಸಂತೋಷ ಆಜೂರ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ತಿತರಿದ್ದರು.

Leave a Reply

ಹೊಸ ಪೋಸ್ಟ್‌