ರಾಷ್ಟ್ರೀಯ ಲೋಕ ಅದಾಲತ: ಕಕ್ಷಿದಾರರ ಅಭೂತಪೂರ್ವ ಸ್ಪಂದನೆ- 13400 ಪ್ರಕರಣಗಳು ಇತ್ಯರ್ಥ

ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು 134000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ 2,19,475 ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ.

ಈ ಲೋಕ ಅದಾಲತ್‌ನಲ್ಲಿ ನಾನಾ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಈ ರಾಷ್ಟ್ರೀಯ ಲೋಕ್ ಅದಾಲತನ ಯಶಸ್ಸಿಗೆ ಸಹಕರಿಸಿದ ಎಲ್ಲಾ ವಕೀಲರು, ಕಕ್ಷಿದಾರರು, ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಪ್ರಚಾರದಲ್ಲಿ ಸಹಭಾಗಿಯಾದ ಎಲ್ಲರಿಗೂ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ ಅವರು ಅಭಿನಂದಿಸಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

ಹೊಸ ಪೋಸ್ಟ್‌