ವಿಜಯಪುರ: ನಗರದ ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರದಿಂದ ಜಿಲ್ಲಾ ಪಂಚಾಯಿತಿ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ ನಿರ್ಮಾಣಕ್ಕಾಗಿ ನಿಗದಿಪಡಿಸಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲಾ ಮಟ್ಟದ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.