ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿಗೆ ಡಿಸಿ ಟಿ. ಭೂಬಾಲನ್ ಮನವಿ

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಓರಿಯೆಂಟಲ್ ಜನರಲ್ ಇನ್ಸೂರೆನ್ಸ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರು ತಮ್ಮ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೋಂದಣಿಗೆ 31.07.2024 ಕೊನೆಯ ದಿನವಾಗಿದೆ.  ನೀರಾವರಿ […]

ಬೆಳೆಗಳ ವಿವರ ಮೊಬೈಲ್ ಆಪ್‍ನಲ್ಲಿ ದಾಖಲಿಸಿ- ರೈತರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ

ವಿಜಯಪುರ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‍ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು 31.08.2024ರ […]