ಇಂಡಿಯಲ್ಲಿ ಡೆಂಗ್ಯು ಜನಜಾಗೃತಿ ಜಾಥಾಕ್ಕೆ ಡಿಸಿ ಟಿ. ಭೂಬಾಲನ್ ಚಾಲನೆ

ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ.

ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಡೆಂಗ್ಯು ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಳೆಗಾಲ ಆರಂಭವಾಗಿರುವುದರಿಂದ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ಜಾಗೃತೆ ವಹಿಸಬೇಕು.  ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು, ಸಂಗ್ರಹಿಸಿರುವ ಮನೆಯಲ್ಲಿನ ತೊಟ್ಟಿ, ಡ್ರಮ್‌ ಗಳಲ್ಲಿ ಸಂಗ್ರಹ ಮಾಡಿದ  ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಡಿಸಿ ಟಿ. ಭೂಬಾಲನ್ ಡೆಂಗ್ಯು ನಿಯಂತ್ರಣ ಕುರಿತು ಪರಿಶೀಲನೆ ನಡೆಸಿದರು.

ಮಿನಿ ವಿಧಾನಸೌಧದಿಂದ ಪ್ರಾರಂಭವಾದ ಡೆಂಗ್ಯು ಜಾಗೃತಿ ಜಾಥಾ ಬಸವೇಶ್ವರ ಸರ್ಕಲ್, ಮಹಾವೀರ ಸರ್ಕಲ್ ಮಾರ್ಗದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು.

ಈ ಕಾರ್ಯಕ್ರಮದಲ್ಲಿ ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ತಹಸೀಲ್ದಾರ ಸಂಜಯ ಇಂಗಳೆ, ತಾಲೂಕು ಆರೋಗ್ಯಾಧಿಕಾರಿ ಡಾ. ರಚನಾ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ದೈಹಿಕ ಶಿಕ್ಷಕ ಎಚ್. ಕೆ. ಮಳಗೊಂಡ, ಆರೋಗ್ಯ ಇಲಾಖೆ, ಪುರಸಭೆ ಅಧಿಕಾರಿಗಳು, ಸಿಬ್ಬಂದಿ, ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ಉಪನ್ಯಾಸಕರು, ಆಶಾ ಕಾರ್ಯಕರ್ತೆರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಸ್ವಚ್ಛತೆ, ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದರು.  ಅಲ್ಲದೇ, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

ಹೊಸ ಪೋಸ್ಟ್‌