ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್: ಜಿ. ಪಂ. ಸಿಇಓ ರಿಷಿ ಆನಂದ ಪರಿಶೀಲನೆ

ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ನಾನಾ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದ್ದಾರೆ.   ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ 2024-25ನೇ ವರ್ಷದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ […]

ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ಶಾಲು, ತುರಾಯಿ ಸನ್ಮಾನ ಕಡ್ಡಾಯ ನಿಷೇಧ- ತಪ್ಪಿದರೆ ಶಿಸ್ತು ಕ್ರಮ ಡಿಸಿ ಟಿ. ಭೂಬಾಲನ್

ವಿಜಯಪುರ: ಯಾವುದೇ ಸರಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕೆ. ಸಿ. ಎಸ್. ಆರ್. 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರಕಾರಿ ಸಮಾರಂಭಗಳಲ್ಲಿ […]

ಪತ್ರಕರ್ತರಾದ ಅಶೋಕ ಯಡಳ್ಳಿ, ಇರಫಾನ್ ಶೇಖ್ ಕಾನಿಪ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಾಮನಿರ್ದೆಶನ

ವಿಜಯಪುರ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟ ನಗರಿ ವ್ಯವಸ್ಥಾಪಕ ಮಹಮ್ಮ ಇರ್ಇಾನ್ ಶೇಖ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೋರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ […]