ವಿಜಯಪುರ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟ ನಗರಿ ವ್ಯವಸ್ಥಾಪಕ ಮಹಮ್ಮ ಇರ್ಇಾನ್ ಶೇಖ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೋರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.