ಗುಮ್ಮಟ ನಗರಿಯ ಐತಿಹಾಸಿಕ ತಾಜಬಾವಡಿ ಸುತ್ತಲಿನ ಅತಿಕ್ರಮಣ ತೆರವು
ವಿಜಯಪುರ: ಐತಿಹಾಸಿಕ ವಿಜಯಪುರ ನಗರವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ತಾಜಬಾವಡಿ ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಐತಿಹಾಸಿಕ ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗೆ ಮೆಲೆ ಅನಧಿಕೃತವಾಗಿ ಒತ್ತು ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ- ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು. ಅನಧಿಕೃತವಾಗಿ ಒತ್ತುವರಿ ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ-ರಚನೆಗಳನ್ನು ತೆರವುಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು […]
ಹೂಗಾರ ನಿಗಮಕ್ಕೆ ರೂ. 100 ಕೋ. ಅನುದಾನ ನೀಡಿ: ಡಾ. ಮಹಾದೇವ ಹೂಗಾರ
ವಿಜಯಪುರ: ಹೂಗಾರ ಸಮಾಜದ ಅಭಿವೃದ್ಧಿಗೆ ರೂ. 1೦೦ ಕೋ. ಹಣ ಮೀಸಲಿಡಬೇಕು. ಕರ್ನಾಟಕದ ಪೂಜಾರ, ಗುರವ, ಜೀರ, ಮಾಲಗಾರ, ಹೂಗಾರ ಅಭಿವೃದ್ಧಿ ನಿಗಮಕ್ಕೆ ಹೂಗಾರ ಸಮಾಜದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಿಡಗುಂದಿಯಲ್ಲಿ ಹೂಗಾರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಾಜದ ಕಾರ್ಯಕರ್ತರು, ಹೂಗಾರ ಸಮಾಜವು ಅತ್ಯಂತ ಹಿಂದುಳಿದಿದ್ದು, ಅಭಿವೃದ್ಧಿಗೆ ಯಾರೂ ಸ್ಪಂದಿಸುತ್ತಿಲ್ಲ. ಸಮಾಜದ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು ಇಡದೆ ನಮ್ಮ […]