ಮಕ್ಕಳ ಹಿತರಕ್ಷಣೆಗೆ ಪೂರಕವಾಗಿ ಕಾರ್ಯ ನಿರ್ವಹಿಸಿ- ಸಂಗಮೇಶ ಬಬಲೇಶ್ವರ
ವಿಜಯಪುರ: ಮಕ್ಕಳ ಹಿತರಕ್ಷಣೆಗಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಿದಾಗ ಸರ್ಕಾರದ ಆಶಯಗಳು ಸಾಕಾರಗೊಳ್ಳುತ್ತವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾನಾ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳ ಹಿತ ದೃಷ್ಟಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಯುನಿಸೆಫ್ ನೆರವಿನಿಂದ ಬಾಲವಿಕಾಸ ಅಕಾಡೆಮಿಯು ಹದಿಹರೆಯದ ಬಾಲಕರ ಸಶಕ್ತೀಕರಣ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜ್ಯದಲ್ಲಿ ವಿನೂತನವಾದ ಹೊಸ ಪರಿಕಲ್ಪನೆ ಇದಾಗಿದೆ. ಮಕ್ಕಳ […]