ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ […]

ನಾರಾಯಣಪ್ಪ ಕುರುಬರ ದಕ್ಷ, ಪ್ರಾಮಾಣಿಕ ಡಿಸಿ- ಸಿಬ್ಬಂದಿ ಪ್ರಯಾಣಿಕರಿಗೆ ಅವರ ಸೇವೆ ಶ್ಲಾಘನೀಯ- ಐ. ಐ. ಮುಶ್ರೀಫ್

ವಿಜಯಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗಕ್ಕೆ ಮತ್ತೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಆಗಮಿಸಿರುವ ನಾರಾಯಣಪ್ಪ ಕುರುಬರ ಅವರಿಗೆ ಸಾರಿಗೆ ನೌಕರರ ಮಹಾಂಡಳದ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾಮಂಡಳದ ಕಾರ್ಯದರ್ಶಿ ಐ. ಐ. ಮುಶ್ರಿಫ್, ಈ ಹಿಂದೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ನಾರಾಯಣಪ್ಪ ಕುರುಬರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು.  ಕೊರೊನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಯ ನಿರ್ವಹಿಸಲು ಹಿಂಜರಿದಾಗ ಮತ್ತು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾಗ  ನಾರಾಯಣಪ್ಪ ಕುರುಬರ […]

ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡಲು ಆಗ್ರಹ- ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಗಡಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಪ್ರವಾಸದಲ್ಲಿರುವ ಸೋಮಣ್ಣ ಬೇವಿಜಮರದ ಅವರನ್ನು ಭೇಟಿ ಮಾಡಿದ ವಿಜಯಪುರ ಸ್ಥಳೀಯ ಪತ್ರಿಕೆಗಳ ಸಂಪಾದಕರು ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ […]

ಮಹಾರಾಷ್ಚ್ರದಲ್ಲಿ ಮಳೆ ತುಂಬಿ ಹರಿಯುತ್ತಿದೆ ಭೀಮಾ ಹೊಳೆ- ಗಡಿಯಲ್ಲಿರುವ ಎಂಟೂ ಬ್ಯಾರೇಜುಗಳು ಮುಳಗಡೆ

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುವಂತೆ ಮಾಡಿದೆ.  ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿದ ಮಳೆಯಿಂದಾಗಿ ಮಹಾರಾಷ್‌ಟರ ಕೋಯ್ನಾ ಜಲಾಷಯದಿಂದ ನೀರು ಬಿಡುಗಡೆ ಮಾಡಿದ್ದರಿಂದಾಗಿ ಈಗಾಗಲೇ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.  ಈಗ ಪುಣೆ ಮತ್ತೀತರ ಕಡೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರ ಉಜನಿ ಮತ್ತೀತರ ಜಲಾಷಯಗಳಿಂದ 1.20 ಲಕ್ಷ್ಯ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಈಗ ಭೀಮಾ ನದಿಯೂ ತುಂಬಿ ಹರಿಯುತ್ತಿದೆ. ಸೋಮವಾರ ಸಂಜೆಯಿಂದಲೇ ಬಸವನಾಡು ವಿಜಯಪುರ ಜಿಲ್ಲೆಯ ಚಡಚಣ […]