ಉಕ ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ಕರ್ನಾಟಕದಲ್ಲಿ ವಿಶ್ರಾಂತಿ ಧಾಮ ಆರಂಭಿಸಿ- ಸಚಿವ ರಾಮಲಿಂಗಾರೆಡ್ಡಿಗೆ ಸುನೀಲಗೌಡ ಪಾಟೀಲ ಮನವಿ

ವಿಜಯಪುರ: ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ಕರ್ನಾಟಕದಲ್ಲಿ ಸಾರಿಗೆ ಇಲಾಖೆಯಿಂದ ಮೂಲಭೂತ ಸೌಕರ್ಯವುಳ್ಳ ವಿಶ್ರಾಂತಿ ದಾಮ ಆರಂಭಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಂದು ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮುಂತಾದ ಜಿಲ್ಲೆಗಳಿಂದ ಪ್ರತಿನಿತ್ಯ […]

ಪ್ರಯಾಣಿಕನ ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವನಾಡಿನ ಚಾಲಕ, ನಿರ್ವಾಹಕ

ವಿಜಯಪುರ: ಪ್ರಯಾಣಿಕನೊಬ್ಬ ಬಸ್ಸಿನಲ್ಲಿ ಮರೆತು ಹೋಗಿದ್ದ ಲ್ಯಾಪಟಾಪ್ ನ್ನು ಮರಳಿಸುವ ಮೂಲಕ ವಿಜಯಪುರ 1ನೇ ಘಟಕದ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಜಯಪುರ ನಗರ ಘಟಕ-1ರ ಬಸ್ ಕೆಎ-28/ಎಫ್- 1703 ವಿಜಯಪುರ ನಗರದಿಂದ ಮುಳಸಾವಳಗಿಗೆ ಸಂಚರಿಸಿತ್ತು.  ಈ ಸಂದರ್ಭದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನೂರಲಿಶಾ ಮಕಾಂದಾರ ಅವರು ಮುಳಸಾವಳಗಿಗೆ ಇಳಿಯುವ ಸಂದರ್ಭದಲ್ಲಿ ತನ್ನ ರೂ. 50 ಸಾವಿರ ಮೌಲ್ಯದ ಲ್ಯಾಪಟಾಪ್ ನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದರು. ಇದನ್ನು ಗಮನಿಸಿದ ಬಸ್ಸಿನ ಚಾಲಕ ಶೇಖರ ಬೋಗಂ ಮತ್ತು ನಿರ್ವಾಹಕ […]

ಭೀಮಾ ನದಿ ಪ್ರವಾಹ: ಸೊನ್ನ ಬ್ಯಾರೇಜ್‍ಗೆ ಡಿಸಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ- ಮುನ್ನೆಚ್ಚರಿಕೆ ವಹಿಸಲು ಖಡಕ್ ಸೂಚನೆ

ವಿಜಯಪುರ: ಮಹಾರಾಷ್ಟ್ರ ಭೀಮಾ ನದಿಗೆ 1.60 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಸೊನ್ನ ಬ್ಯಾರೇಜ್ ಹಿನ್ನೀರಿನಿಂದ ವಿಜಯಪುರ ಜಿಲ್ಲೆಯ ಗ್ರಾಮಗಳಿಗೆ ಉಂಟಾಗುವ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕಲಬುರಗಿ ಜಿಲ್ಲೆಯ ಅಫಝಲಪುರ ತಾಲೂಕಿನಲ್ಲಿ ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ  ಫೌಜಿಯಾ ತರನ್ನುಮ ಅವರೊ ಕೂಡ ಉಪಸ್ಥಿತರಿದ್ದರು.  ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ […]