ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ವಿಜಯಪುರ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕೇಂದ್ರದಲ್ಲಿ ಒದಗಿಸುತ್ತಿರುವ ಆಪ್ತ ಸಮಾಲೋಚನೆ ಹಾಗೂ ಸಲಹೆಗಳ ಕುರಿತು ಪರಿಶೀಲಿಸಿ, ದಾಖಲಾಗಿರುವ ಪ್ರಕರಣಗಳ ಪ್ರತ್ಯೇಕ ಕಡತ, ದೂರವಾಣಿ ಕರೆಗಳ ವಹಿ, ಸಂದರ್ಶಕರ ವಹಿ, ಆಪ್ತ ಸಮಾಲೋಚನಾ ದಾಖಲಾತಿ, ಕೇಂದ್ರದ ಮಾಸಿಕ ಪ್ರಗತಿ ವರದಿ, ಪ್ರಕರಣಗಳ ದಾಖಲಾತಿ ಪುಸ್ತಕ, ಸಿಬ್ಬಂದಿಗಳ ಹಾಜರಾತಿ ಪುಸ್ತಕ ಹಲವಾರು ದಾಖಲಾತಿ ಪರಿಶೀಲಿಸಿದರು. ಕೇಂದ್ರದಲ್ಲಿ ಒದಗಿಸಲಾದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಾಂತ್ವನ ಕೇಂದ್ರಕ್ಕೆ ವರದಿಯಾಗುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆೆ ಇತ್ಯರ್ಥಪಡಿಸಿ ಸಕಾಲದಲ್ಲಿ ಪರಿಹಾರ ಒದಗಿಸಬೇಕು ಸಾಂತ್ವನ ಕೇಂದ್ರದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಜಿ. ಪಂ. ಸಿಇಓ ರಿಷಿ ಆನಂದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಬೆನಕಟ್ಟಿ, ಆಪ್ತ ಸಮಾಲೋಚಕರಾದ ರಿಯಾನಬಿ ಎಸ್. ಕಡಕೋಳ, ಸಮಾಜ ಕಾರ್ಯಕರ್ತರಾದ ಖಾಜಮ್ಮ ಮರಾಠಿ ಮತ್ತು ಸ್ನೇಹ ಹಾಬರಿ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌