ರಾಜ್ಯಪಾಲರ ವಿರುದ್ಧ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ನಾನಾ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯಪಾಲರ ಪ್ರತಿಕೃತಿ ದಹನ ಮಾಡಿದರು. ನಗರದ ಗಾಂಧಿಚೌಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸೋಮನಾಥ ಕಳ್ಳಿಮನಿ ಮತ್ತೀತರ ಮುಖಂಡರು ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ರಾಜ್ಯದ ಜನ ಅವರ ಜೊತೆಗಿದ್ದಾರೆ. ಸಿಎಂ ತೇಜೋವಧೆ ಮಾಡುವ ಉದ್ದೇಶದಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ […]
ಆ. 22ರಂದು ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ: ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆಗೆ ಡಿಸಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಆ. 22ರಂದು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕರ್ನಾಟಕದ ಉಪ ಲೋಕಾಯುಕ್ತರು ಅಂದು ಬೆಳಿಗ್ಗೆ 10 ರಿಂದ 1-30ರವರೆಗೆ ಹಾಗೂ ಮಧ್ಯಾಹ್ನ […]
ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಮನವಿ ಪತ್ರ ಸಲ್ಲಿಕೆ
ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕ- 2014ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಭವಿಷ್ಯವರ್ತಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳುವ ಮೂಲಕ 01.04.2006ರ ಪೂರ್ವದಲ್ಲಿ ನೇಮಕವಾಗಿ […]
ಚಿಕ್ಕಗಲಗಲಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ, ಶ್ರೀ ವೇಮನ ದೇವಾಲಯ ಉದ್ಘಾಟನೆ
ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯ ದಂಡೆಯಲ್ಲಿರುವ ಚಿಕ್ಕಗಲಗಲಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ವೇಮನ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮರೆಗುದ್ದಿಯ ಶ್ರೀ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ಹೇಮರೆಡ್ಡಿ ಮಲ್ಲಮ್ಮ ಮಾನವಳಾಗಿ ಜನಿಸಿ ಶ್ರೀ ಮಲ್ಲಯ್ಯನ ಭಕ್ತಳಾಗಿ ಪರಮಾತ್ಮನಿಂದ ವರ ಪಡೆದು ಕಾಯಕದಲ್ಲಿ ದೇವರನ್ನು ನೆನೆದು ದೇವತೆಯಾಗಿ ಮನುಕುಲ ಉದ್ಧಾರಕ್ಕಾಗಿ ದೇವರ ಆಶಿರ್ವಾದ ಪಡೆದ ಮಹಾಸಾದ್ವಿಯಾಗಿದ್ದಾಳೆ ಎಂದು ಹೇಳಿದರು. ನಿಡೋಣಿಯ ರಾಮಚಂದ್ರ ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಅಡವಿ […]