ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು- ಡಾ. ಮಂಜುನಾಥ ಸಾವಂತ

ವಿಜಯಪುರ: ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಇದನ್ನು ಗುಣಪಡಿಸಬಹುದಾಗಿದೆ. ಇಲ್ಲದಿದ್ದರೆ ಅದು ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರಿ ಮೆದುಳಿಗೆ ಘಾಸಿಯಾಗಿ ಮಾರಣಾಂತಿಕವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ ಹೇಳಿದ್ದಾರೆ. ಶನಿವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಬಿ.ಎಲ್.ಡಿ.ಇ ಪಿಯು ಕಾಲೇಜಿನಲ್ಲಿ ಶ್ರೀ ಬಿ. ಎಂ. ಪಾಟೀಲ, ವೈದ್ಯಕೀಯ ಮಹಾವಿದ್ಯಾಲಯ, ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಶಸ್ತ್ರ […]

ಉಕ್ಕಲಿಯಲ್ಲಿ ವೈದ್ಯಕೀಯ, ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಸೇವಾ ಅಭಿಯಾನ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ವರೆಗೆ ಸ್ವಚ್ಛತಾ ಹಿ ಸೇವಾ-2024 ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸ್ವಚ್ಛತೆ ಅಭಿಯಾನದ ಅಂಗವಾಗಿ ಗುರುವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಸರಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಸ್ವಚ್ಛತೆ ಪ್ರತಿಜ್ಞೆ ಮಾಡಿಸಲಾಯಿತು. ಪ್ರತಿವಾರ ಎರಡು ಗಂಟೆಯಂತೆ ವರ್ಷಕ್ಕೆ 100 ಗಂಟೆ ಸ್ವಚ್ಛತೆಗೆ ಮೀಸಲಿಡಲು ಮತ್ತು ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕದಿರಲು ಕುರಿತು ಗ್ರಾಮಸ್ಥರಲ್ಲಿ ಅರಿವು ಜನಜಾಗೃತಿ […]

ಬಜೆಟ್ ನಲ್ಲಿ ಯುವ ಸಬಲೀಕರಣಕ್ಕೆ ಹೆಚ್ಚಿನ ಹಣ ಕೊಡಿ- ಕೇಂದ್ರ ಸಚಿವ ಮನ್ಸೂಖ್ ಮಾಂಡವೀಯ ವೈಷ್ಣವ ಭೇಟಿ ಮಾಡಿದ ರಾಷ್ಟ್ರೀಯ ಯುವ ಸಲಹಾ ಸಮಿತಿ ಪದಾಧಿಕಾರಿಗಳ ನಿಯೋಗ

ವಿಜಯಪುರ: ಯುವ ಸಬಲೀಕರಣಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸುವುದು, ಯುವ ಸಬಲೀಕರಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ಸೇರಿದಂತೆ ಯುವಕರ ಶ್ರೇಯೋಭಿವೃದ್ದಿಗೆ ಸಂಬಂಧಿಸಿದ ಹಲವಾರು ಯುವಕರ ಪರ  ಕಾರ್ಯಕ್ರಮಗಳ ಅನುಷ್ಠಾನಕ್ಕೆ ಒತ್ತಾಯಿಸಿ  ರಾಷ್ಟ್ರೀಯ ಯುವ ಸಲಹಾ ಸಮಿತಿ ಪದಾಧಿಕಾರಿಗಳ ನಿಯೋಗ ಕೇಂದ್ರ ಯುವ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ನವದೆಹಲಿಯಲ್ಲಿರುವ ಶ್ರಮ ಶಕ್ತಿ ಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಯುವಕರ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಮಹತ್ವದ ವಿಷಯಗಳನ್ನು ಇದೇ ಸಂದರ್ಭದಲ್ಲಿ ಚರ್ಚಿಸಲಾಯಿತು. ನಿಯೋಗದ ನೇತೃತ್ವ ವಹಿಸಿದ್ದ […]